ಶನಿವಾರ, ಫೆಬ್ರವರಿ 27, 2021
30 °C

ಕಾಂಗ್ರೆಸಿಗರು ಎಂದೂ ಮುಖ್ಯಮಂತ್ರಿ ಆಗುವುದಿಲ್ಲ: ಕೆ.ಎಸ್‌ ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಪೈಪೋಟಿಯಲ್ಲಿ ಹಗಲುಗನಸು ಕಾಣುತ್ತಿದ್ದಾರೆ. ಆದರೆ ಭವಿಷ್ಯದಲ್ಲಿ ಯಾವ ಕಾಂಗ್ರೆಸಿಗರೂ ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವುದಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.

ಜಿಲ್ಲಾ ಪಂಚಾಯ್ತಿಯ ನೂತನ ಕಟ್ಟಡ ಉದ್ಘಾಟಿಸಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ಮುಖ್ಯಮಂತ್ರಿ ನಾನೇ ಎಂದೆನ್ನುವ ಸಿದ್ದರಾಮಯ್ಯ ಅವರದ್ದು ಸರ್ವಾಧಿಕಾರಿ ಧೋರಣೆ. ಪಕ್ಷದ ಹೈಕಮಾಂಡ್‌ ಹಾಗೂ ಅಲ್ಲಿನ ನಾಯಕರು ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಒಂದು ಪಕ್ಷದಲ್ಲಿದ್ದ ಅಭ್ಯಾಸವಿಲ್ಲದ ಸಿದ್ದರಾಮಯ್ಯ ವಿರುದ್ಧ ಡಿ.ಕೆ.ಶಿವಕುಮಾರ ಅವರಿಗೆ ‘ಧಂ’ ಇದ್ದರೆ ಕ್ರಮ ತೆಗೆದುಕೊಳ್ಳಲಿ’ ಎಂದು ಸವಾಲೆಸೆದರು.

’ಕಾಂಗ್ರೆಸ್ ಒಂದು ಮುಳುಗುವ ಹಡಗಾಗಿದ್ದು, ಅದರಲ್ಲಿರುವ ಹಲವರು ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅಲ್ಲಿಂದ ಹೊರಗೆ ಬರುತ್ತಿದ್ದಾರೆ. ಅವರಲ್ಲಿ ಹಲವರು ಬಿಜೆಪಿ ಸೇರುತ್ತಿದ್ದಾರೆ’ ಎಂದು ಈಶ್ವರಪ್ಪ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು