ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಲಂಚ ಸ್ವೀಕರಿಸುವುದಿಲ್ಲ’: ವಿಧಾನಸೌಧದ ಅಧಿಕಾರಿಗಳ ಪ್ರತಿಜ್ಞೆ!

Last Updated 26 ಅಕ್ಟೋಬರ್ 2021, 19:06 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಲಂಚ ಪಡೆಯುವುದಿಲ್ಲ ಮತ್ತು ನೀಡುವುದೂ ಇಲ್ಲ. ಜೀವನದ ಎಲ್ಲ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳು ಅನುಸರಿಸುತ್ತೇನೆ’ ಎಂದು ವಿಧಾನಸಭೆಯ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಜ್ಞೆ ಸ್ವೀಕರಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ನಡೆದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ‘ಜಾಗೃತಿ ಅರಿವು’ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಸಚಿವಾಲಯ ಸಿಬ್ಬಂದಿಗೆ ಪ್ರತಿಜ್ಞೆ ಬೋಧಿಸಿದರು.

ಅಧಿಕಾರಿಗಳ ಪ್ರತಿಜ್ಞೆ: ‘ನಮ್ಮ ದೇಶದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಅಡಚಣೆಯಾಗಿದೆ ಎಂದು ನಾನು ನಂಬುತ್ತೇನೆ. ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸರ್ಕಾರ, ಖಾಸಗಿ ವಲಯದಂತಹ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ನಾನು ನಂಬುತ್ತೇನೆ’.

‘ಎಲ್ಲಾ ಕಾರ್ಯಗಳು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿಯಲ್ಲಿ ನಿರ್ವಹಿಸುತ್ತೇನೆ. ಯಾವುದೇ ಭ್ರಷ್ಟಾಚಾರದ ಘಟನೆಯನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇನೆ’.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT