ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಎರಡು ಜಿಲ್ಲೆ ಸೋಂಕು ಮುಕ್ತ

Last Updated 9 ಡಿಸೆಂಬರ್ 2021, 19:39 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, ಸದ್ಯ 7,332 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಯಾದಗಿರಿ ಹಾಗೂ ಗದಗ ಕೋವಿಡ್ ಮುಕ್ತವಾಗಿದೆ.

ಒಂದು ದಿನದ ಅವಧಿಯಲ್ಲಿ 1.18 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ.ಗುರುವಾರ 373 ಮಂದಿಕೋವಿಡ್ಪೀಡಿತರಾಗಿರುವುದು ದೃಢಪಟ್ಟಿದೆ.19 ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, ಸೋಂಕು ದೃಢ ಪ್ರಮಾಣ ಶೇ 0.31ರಷ್ಟಿದೆ. ಆರು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 12 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಳ್ಳಾರಿ, ಬೀದರ್ ಸೇರಿದಂತೆ 11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.

ಬೆಂಗಳೂರು ನಗರದಲ್ಲಿ 211 ಮಂದಿಕೋವಿಡ್ಪೀಡಿತರಾಗಿದ್ದಾರೆ. ‌ಶಿವಮೊಗ್ಗದಲ್ಲಿ 30, ಕೊಡಗಿನಲ್ಲಿ 21, ಹಾಸನದಲ್ಲಿ 12, ತುಮಕೂರು ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ 11 ಪ್ರಕರಣಗಳುವರದಿಯಾಗಿವೆ.ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 10ಕ್ಕಿಂತ ಕಡಿಮೆಯಿದೆ.ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30 ಲಕ್ಷದ ಗಡಿ (29,99,471) ಸಮೀಪಿಸಿದೆ.

ಸೋಂಕಿತರಲ್ಲಿ 292 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.53 ಲಕ್ಷ ದಾಟಿದೆ. ಬೆಂಗಳೂರಿನಲ್ಲಿ 5,509 ಸೋಂಕಿತರಿದ್ದಾರೆ.ವಿಜಯಪುರ, ರಾಮನಗರ ಸೇರಿದಂತೆ 7 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.

ಕೋವಿಡ್ಪೀಡಿತರಲ್ಲಿ ಬೆಂಗಳೂರಿನಲ್ಲಿ ನಾಲ್ವರು ಮೃತಪಟ್ಟಿರುವುದು ಖಚಿತಪಟ್ಟಿದೆ. ಉಳಿದ ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣ ವರದಿಯಾಗಿಲ್ಲ. ಮರಣ ಪ್ರಮಾಣ ದರವು ಶೇ 1.07 ರಷ್ಟು ಇದೆ. ಈವರೆಗೆಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,253ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT