ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಬಿಜೆಪಿರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವರು, ಶಾಸಕರ ಮಧ್ಯೆ ಯಾವುದೇ ಭಿನ್ನಮತವಿಲ್ಲ. ಯಾವುದೇ ಶಾಸಕರಿಗೆ ಏನಾದರೂ ಹೇಳುವುದಿದ್ದರೆ, ವೈಯಕ್ತಿಕವಾಗಿ ನನ್ನ ಬಳಿ ಹೇಳಿಕೊಳ್ಳಬಹುದು. ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದು ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಎಲ್ಲ ಸಚಿವರು ಹಗಲು ರಾತ್ರಿ ಎನ್ನದೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕೋವಿಡ್‌ನಿಂದ ಮೃತಪಟ್ಟ ಬಡ ಕುಟುಂಬಗಳಿಗೆ ತಲಾ ₹1 ಲಕ್ಷ ನೀಡುವ ಯೋಜನೆ ದೇಶದಲ್ಲೇ ಪ್ರಥಮ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.