ಗುರುವಾರ , ಮಾರ್ಚ್ 30, 2023
24 °C

ಲಸಿಕೆ ಹಂಚಿಕೆಯಲ್ಲಿ ತಾರತಮ್ಯ ಇಲ್ಲ: ಡಾ.ಕೆ. ಸುಧಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಲಸಿಕೆ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಇಲ್ಲ. ವೈಜ್ಞಾನಿಕ ಮಾನದಂಡಗಳ ಆಧಾರದಲ್ಲಿ ಲಸಿಕೆ ಹಂಚಿಕೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಜನ ಸಾಂದ್ರತೆ, ಆದ್ಯತಾ ಗುಂಪಿನಲ್ಲಿರುವ ಜನರ ಸಂಖ್ಯೆ ಆಧರಿಸಿ ವಿವಿಧ ಜಿಲ್ಲೆಗಳು, ತಾಲ್ಲೂಕುಗಳಿಗೆ ಕೋವಿಡ್‌ ಲಸಿಕೆ ಹಂಚಿಕೆ ಮಾಡಲಾಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರೇ ಲಸಿಕೆ ಹಂಚಿಕೆಯ ಮೇಲೆ ನಿಗಾ ಇರಿಸಿದ್ದಾರೆ’ ಎಂದರು.

ರಾಜ್ಯಕ್ಕೆ ಹಂಚಿಕೆಯಾಗಬೇಕಿದ್ದ ಪ್ರಮಾಣಕ್ಕಿಂತಲೂ ಹೆಚ್ಚು ಲಸಿಕೆ ಬಂದಿದೆ. ಗುರುವಾರ ರಾಜ್ಯಕ್ಕೆ 7.5 ಲಕ್ಷ ಡೋಸ್‌ ಲಸಿಕೆ ಪೂರೈಕೆಯಾಗಿದೆ. ರಾಜ್ಯದಲ್ಲಿ ಹೆಚ್ಚು ಪ್ರಮಾಣದ ಲಸಿಕೆ ನೀಡುತ್ತಿರುವುದರಿಂದ ಇನ್ನೂ ಹೆಚ್ಚಿನ ಲಸಿಕೆ ಅಗತ್ಯವಿದೆ. ಹೆಚ್ಚು ಲಸಿಕೆ ಹಂಚಿಕೆ ಮಾಡುವಂತೆ ಕೇಂದ್ರ ಸರ್ಕಾರದ ಮುಂದೆ ಬೇಡಿಕೆ ಮಂಡಿಸಲು ಶೀಘ್ರದಲ್ಲಿ ದೆಹಲಿಗೆ ತೆರಳಲಾಗವುಉದು ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು