ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಆರ್ಥಿಕ ತೊಡಕು

Last Updated 17 ಸೆಪ್ಟೆಂಬರ್ 2021, 16:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ವ್ಯಾಪ್ತಿಯ 140 ಬಸ್‌ ನಿಲ್ದಾಣಗಳಲ್ಲಿ ಮಹಿಳೆಯರ ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಆರ್ಥಿಕ ತೊಡಕು ಎದುರಾಗಿದೆ ಎಂದು ಸಾರಿಗೆ ಇಲಾಖೆ ಹೇಳಿದೆ.

ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ನ ಕೆ.ಟಿ. ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಶುಕ್ರವಾರ ಸಾರಿಗೆ ಸಚಿವರ ಪರವಾಗಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉತ್ತರ ನೀಡಿದರು.

‘ನಾಲ್ಕು ಸಾರಿಗೆ ನಿಮಗಳ ವ್ಯಾಪ್ತಿಯಲ್ಲಿ 547 ಬಸ್‌ ನಿಲ್ದಾಣಗಳಿವೆ. ಅವುಗಳಲ್ಲಿ 410 ಬಸ್‌ ನಿಲ್ದಾಣಗಳಲ್ಲಿ ಮಾತ್ರ ಮಹಿಳೆಯರಿಗೆ ವಿಶ್ರಾಂತಿ ಗೃಹ ಇದೆ’ ಎಂದರು.

ಸಾರಿಗೆ ನಿಗಮಗಳು ನಷ್ಟಕ್ಕೆ ಸಿಲುಕಿವೆ. ಆರ್ಥಿಕ ತೊಂದರೆಯ ಕಾರಣದಿಂದ ಯಾವುದೇ ಕಾಮಗಾರಿ ಕೈಗೊಳ್ಳುವ ಪರಿಸ್ಥಿತಿ ಇಲ್ಲ. ಹಣದ ಲಭ್ಯತೆ ಆಧರಿಸಿ ಮುಂದೆ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಉತ್ತರಕ್ಕೆ ಹಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

‘ಮಹಿಳೆಯರಿಗೆ ಶೌಚಾಲಯ, ವಿಶ್ರಾಂತಿ ಗೃಹ ಸೌಲಭ್ಯ ಒದಗಿಸುವುದಕ್ಕೂ ಆರ್ಥಿಕ ಅಡಚಣೆ ಎನ್ನುವುದು ಸರಿಯಲ್ಲ’ ಎಂದು ಬಿಜೆಪಿಯ ಭಾರತಿ ಶೆಟ್ಟಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT