ಬೆಂಗಳೂರು: ಪ್ರಮುಖವಾಗಿ ಕನಕಪುರ, ಬೆಂಗಳೂರು ಮತ್ತು ದೆಹಲಿಯ ನಮ್ಮ ಮನೆ ಮತ್ತು ಕಚೇರಿಗಳಿಗೆ ಬಂದು ಯಾವುದೇ ಕಿರುಕುಳ ನೀಡದೇ ವೃತ್ತಿಪರವಾಗಿ ನಡೆದುಕೊಂಡ ಸಿಬಿಐ ಅಧಿಕಾರಿಗಳಿಗೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅಧಿಕಾರಿಗಳ ದಾಖಲೆ ಪರಿಶೀಲನೆಯಲ್ಲಿ ನನ್ನ ಮತ್ತು ನನ್ನ ಅಣ್ಣನ ಮನೆಯಿಂದ ಸೇರಿ ಒಟ್ಟು ₹ 6.78 ಲಕ್ಷ ರೂಪಾಯಿ ಸಿಕ್ಕಿರುತ್ತದೆ. ಅದರಲ್ಲಿ ನನ್ನ ದೆಹಲಿ ನಿವಾಸದಲ್ಲಿ ₹ 1.57 ಲಕ್ಷ, ಬೆಂಗಳೂರಿನ ನನ್ನ ಅಣ್ಣನ ನಿವಾಸದಲ್ಲಿ ₹ 1.71 ಲಕ್ಷ, ಅವರ ಬೆಂಗಳೂರಿನ ಕಛೇರಿಯಲ್ಲಿ ₹ 3.5 ಲಕ್ಷ ಅಧಿಕಾರಿಗಳಿಗೆ ಸಿಕ್ಕಿರುವುದು ಖಾತ್ರಿ ಪಡಿಸಿದ್ದಾರೆ ಎಂದಿದ್ದಾರೆ.

ನನ್ನ ಅಣ್ಣನ ದೆಹಲಿ ಮನೆ ಮತ್ತು ನನ್ನ ಬೆಂಗಳೂರಿನ ಮನೆಯಲ್ಲಿ ಯಾವುದೇ ಹಣ ಸಿಕ್ಕಿಲ್ಲ. ಹಾಗೆಯೇ ನಮ್ಮ ಎರಡೂ ಮನೆಗಳಲ್ಲಿ ಅಧಿಕಾರಿಗಳು ಇಲ್ಲಿಯವರೆಗೂ ಯಾವುದೇ ಆಭರಣಗಳನ್ನೂ ವಶಪಡಿಸಿಕೊಂಡಿಲ್ಲ. ಆಭರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಐಟಿ ಮತ್ತು ಇ.ಡಿಗೆ ಕೊಟ್ಟ ದಾಖಲೆಗಳನ್ನೇ ಮತ್ತೊಮ್ಮೆ ಸಿಬಿಐ ಸ್ಪಷ್ಟನೆ ತಗೆದುಕೊಂಡಿದೆ ಎಂದು ತಿಳಿಸಿದ್ದಾರೆ.

ಸಿಬಿಐ ಅಧಿಕಾರಿಗಳು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ಒಟ್ಟು ₹ 57 ಲಕ್ಷ ಸಿಕ್ಕಿರುವ ಮಾಹಿತಿ ನೀಡಿದ್ದಾರೆ. ಇದರಲ್ಲಿ ಬಾಕಿ ₹ 50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ, ಅದರ ಹಿನ್ನೆಲೆ ಏನು ಎಂಬುದನ್ನು ಅಧಿಕಾರಿಗಳೇ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ಐಟಿ ಮತ್ತು ಇಡಿ ಅಧಿಕಾರಿಗಳು ಪರಿಶೀಲಿಸಿದ ದಾಖಲೆಗಳ ನಕಲು ಪ್ರತಿಗಳನ್ನು ಸಿಬಿಐ ಕಡೆ ಕೊಟ್ಟಿರುತ್ತೇವೆ. ಇನ್ನು ಮುಂದೆಯೂ ಬೇಕಾದ ಎಲ್ಲಾ ದಾಖಲೆಗಳನ್ನು ಒಪ್ಪಿಸಲು ತಯಾರಿದ್ದೇವೆ. ಈ ಎಲ್ಲಾ ಪರೀಕ್ಷೆಗಳನ್ನು ಎದುರಿಸಿ ಹೊರಬರುವ ವಿಶ್ವಾಸ ನಮಗಿದೆ. ಅಭಿಮಾನಿಗಳು ಮತ್ತು ಹಿತೈಷಿಗಳಾದ ನಿಮ್ಮೆಲ್ಲರ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.