ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಇಲಾಖೆಯಲ್ಲಿ ವಿಜಯೇಂದ್ರ ಹಸ್ತಕ್ಷೇಪ ಇಲ್ಲ: ಶ್ರೀರಾಮುಲು

Last Updated 16 ಸೆಪ್ಟೆಂಬರ್ 2020, 7:30 IST
ಅಕ್ಷರ ಗಾತ್ರ

ಕಲಬುರ್ಗಿ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಆರೋಗ್ಯ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ವೈದ್ಯರು ಅವರ ಬಳಿ ಹೋಗಿದ್ದಕ್ಕಾಗಿ ಚರ್ಚೆ ಮಾಡಿದ್ದಾರೆ. ಆ ವಿಷಯಗಳನ್ನು ಸಿಎಂ ಜೊತೆ ಚರ್ಚಿಸಿ ಇತ್ಯರ್ಥ ಮಾಡಬಹುದು. ಬೇರೆ ಯಾವ ಇಲಾಖೆಯಲ್ಲಿಯೂ ವಿಜಯೇಂದ್ರ ಹಸ್ತಕ್ಷೇಪ ಮಾಡ್ತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮಲು ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಪುತ್ರ ಅನ್ನುವುದಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ.

ವೈದ್ಯರಿಗೆ ಶೀಘ್ರವೇ ಸಿಹಿ ಸುದ್ದಿ ಕೊಡುತ್ತೇವೆ. ವೈದ್ಯರ ಕೆಲ ಬೇಡಿಕೆಗಳನ್ನ ಈಡೇರಿಸುತ್ತೇವೆ.ಇನ್ನು ಮುಂದೆ ಮುಷ್ಕರಕ್ಕೆ ಮುಂದಾಗಲ್ಲ ಅನ್ನುವ ಭರವಸೆಯಿದೆ ಎಂದರು.

ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗಲಿಕ್ಕಿಲ್ಲ.ಅತಿವೃಷ್ಟಿ ಮತ್ತು ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸಿಎಂ ದೆಹಲಿಗೆ ಹೋಗುತ್ತಿದ್ದಾರೆ.ಸಂಪುಟ ವಿಸ್ತರಣೆ ಮಾತುಕತೆಗೆ ದೆಹಲಿಗೆ ಹೋಗುತ್ತಿಲ್ಲ.

ಕೊರೊನಾ ಸೋಂಕಿತರ ಬಳಿ ಅಧಿಕ ಹಣ ವಸೂಲಿ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಶ್ರೀರಾಮುಲು, ಅಧಿಕ ಹಣ ವಸೂಲಿ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುತ್ತೇವೆ. ಅನುಮತಿ ರದ್ದುಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT