ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌, ಕಠಿಣ ನಿಯಮ ಇಲ್ಲ: ಶುಕ್ರವಾರದ ಸಭೆ ಬಳಿಕ ಮುಂದಿನ ತೀರ್ಮಾನ: ಅಶೋಕ

Last Updated 17 ಜನವರಿ 2022, 13:15 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಕಾರಣಕ್ಕೆ ಲಾಕ್‌ಡೌನ್ ಅಥವಾ ಇನ್ನಷ್ಟು ಕಠಿಣ ನಿಯಮ ಜಾರಿಗೆ ತರುವ ಉದ್ದೇಶವಿಲ್ಲ. ವಾರಂತ್ಯ ಕರ್ಫ್ಯೂ ಮುಂದುವರಿಸಬೇಕೆ ಅಥವಾ ಸಡಿಲಗೊಳಿಸಬೇಕೇ ಎಂಬ ಬಗ್ಗೆ ಶುಕ್ರವಾರ ತುರ್ತುಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೋವಿಡ್‌ ಕುರಿತ ವರ್ಚುವಲ್‌ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ತಜ್ಞರ ಪ್ರಕಾರ ಇದೇ 25 ಅಥವಾ 26 ರ ಸುಮಾರಿಗೆ ಕೋವಿಡ್‌ ಪ್ರಕರಣಗಳು ತಾರಕಕ್ಕೆ ಹೋಗಿ ಬಳಿಕ ಇಳಿಕೆಯಾಗಬೇಕು. ಅದನ್ನು ನೋಡಿಕೊಂಡು ಮುಂದಿನ ತೀರ್ಮಾನ ಮಾಡಬೇಕಾಗಿದೆ. ಪ್ರಕರಣಗಳು ಇಳಿಕೆಯಾದರೆ ನಿಯಮಗಳನ್ನು ಸಡಿಲಿಸಲಾಗುವುದು ಎಂದರು.

ಬೆಂಗಳೂರು ಸೇರಿ ರಾಜ್ಯದ ಎಲ್ಲೆಡೆ ಶುಕ್ರವಾರದವರೆಗೆ ಶಾಲಾ–ಕಾಲೇಜುಗಳು ಯಥಾಸ್ಥಿತಿ ಮುಂದುವರೆಯಲಿವೆ. ಬಳಿಕ ಆ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT