ಭಾನುವಾರ, ನವೆಂಬರ್ 1, 2020
20 °C

‘ಮಾಸ್ಕ್‌ ಧರಿಸದಿರುವಿಕೆ: ನಿತ್ಯ ಕನಿಷ್ಠ 10 ಪ್ರಕರಣ ದಾಖಲಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ₹ 200 ದಂಡ ವಿಧಿಸಬೇಕು. ದಂಡ ಪಾವತಿಸದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಬೇಕು’ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಮಂಗಳವಾರ ಸೂಚಿಸಿದ್ದಾರೆ.

ದಿನಕ್ಕೆ ಕನಿಷ್ಠ 10 ಮಂದಿ ವಿರುದ್ಧವಾದರೂ ಎಫ್‌ಐಆರ್‌ ದಾಖಲಿಸಬೇಕು ಎಂದು ಅವರು ಗ್ರಾಮ ಪಂಚಾಯಿತಿ ಪಿಒಡಿಒಗಳಿಗೆ ಆದೇಶ ಮಾಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಹಾಗೂ ಪ್ರಯಾಣದ ಸಮಯದಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ. ಈ  ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ನಡೆದ ವಿಡಿಯೊ ಸಂವಾದದಲ್ಲಿ ಸೂಚನೆ ನೀಡಲಾಗಿತ್ತು.

ಸಾರ್ವಜನಿಕ ಸ್ಥಳದಲ್ಲಿ ಕನಿಷ್ಠ 6 ಅಡಿ ಅಂತರ ಕಾಪಾಡಬೇಕು. ಮದುವೆ ಸಮಾರಂಭದಲ್ಲಿ 50ಕ್ಕಿಂತ ಹೆಚ್ಚು ಹಾಗೂ ಶವಸಂಸ್ಕಾರದಲ್ಲಿ 20ಕ್ಕಿಂತ ಹೆಚ್ಚು ಮಂದಿ ಭಾಗವಹಿಸದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಜಗಿದು ಉಗಿಯುವುದನ್ನು, ಮದ್ಯಪಾನ ಮಾಡುವುದನ್ನು ನಿರ್ಬಂಧಿಸಬೇಕು ಎಂದು ಮುಖ್ಯಕಾರ್ಯದರ್ಶಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು