ಗುರುವಾರ , ಆಗಸ್ಟ್ 11, 2022
21 °C

ಲಾಬಿ ಮಾಡುವ ಪ್ರಮೇಯ ಬಂದಿಲ್ಲ: ಶಶಿಕಲಾ ಜೊಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಸಚಿವ ಸ್ಥಾನ ಉಳಿಸಿಕೊಳ್ಳಲು ನಾನು ಯಾರ ಬಳಿಯೂ ಲಾಬಿ ಮಾಡಿಲ್ಲ. ಲಾಬಿ ಮಾಡುವ ಪ್ರಮೇಯವೇ ಬಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಸಚಿವ ರಮೇಶ ಜಾರಕಿಹೊಳಿ ಅವರ ಮನೆಗೆ ಇತ್ತೀಚೆಗೆ ಭೇಟಿ ನೀಡಿರುವ ಕುರಿತು ಹರಿದಾಡುತ್ತಿರುವ ಊಹಾಪೂಹಗಳ ಕುರಿತು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಚಿವರ ಬಳಿ ಇಲಾಖೆಗೆ ಸಂಬಂಧಿಸಿದ ಕೆಲಸದ ಬಗ್ಗೆ ಚರ್ಚಿಸಲು ಭೇಟಿಯಾಗಿದ್ದೆ ಎಂದು ಹೇಳಿದರು.

ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಶಾಂತಿಯುತವಾಗಿ ನಡೆಯಬೇಕು. ಎಲ್ಲ ಮತದಾರರು ತಮ್ಮ ಹಕ್ಕು ಚಲಾಯಿಸಬೇಕು ಎಂದು ಜಿಲ್ಲೆಯ ಮತದಾರರಲ್ಲಿ ಮನವಿ ಮಾಡಿದರು.

ಕೋವಿಡ್‌, ಅತಿವೃಷ್ಟಿಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸವಾಲಾಗಿ ಸ್ವೀಕರಿಸಿ ಜನರಿಗೆ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಎಲ್ಲ ಅಧಿಕಾರಿ, ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪರಿಣಾಮ ಜಿಲ್ಲೆಯಲ್ಲಿ ಕೋವಿಡ್‌ ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿದ್ದು, ಸಮಾಧಾನದ ಸಂಗತಿ  ಎಂದರು.  

ಜಿಲ್ಲೆಯಲ್ಲಿ ಭೀಮಾ, ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರ ಪರಿಹಾರ ಒಗಿಸುವ ಕಾರ್ಯ ನಡೆದಿದೆ. ಕೇಂದ್ರ ಸರ್ಕಾರದ ಕಿಸಾನ್‌ ಸನ್ಮಾನ್‌ ಯೋಜನೆಯಡಿ ರೈತರ ಬ್ಯಾಂಕ್‌ ಅಕೌಂಟ್‌ಗೆ ಹಣ ಹಾಕಲಾಗುತ್ತಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪುರ, ಮಾಜಿ ಶಾಸಕ ಎಸ್‌.ಕೆ.ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಎಸ್‌.ಪಾಟೀಲ ಕೂಚಬಾಳ, ಮುಖಂಡರಾದ ಶಿವರುದ್ರ ಬಾಗಲಕೋಟೆ, ಅಶೋಕ ಮಲ್ಲಾಪುರ, ವಿಜಯಕುಮಾರ ಜೋಶಿ ದಯಾ ಸಾಗರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು