ಶನಿವಾರ, ಜನವರಿ 23, 2021
18 °C

ಪರಿಶಿಷ್ಟ ಪಂಗಡದ ಮೀಸಲಾತಿಗೆ ಕುರುಬರ ಹೋರಾಟ; ‘ಸಿದ್ದರಾಮಯ್ಯ ವಿರೋಧವಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಂಧನೂರು (ರಾಯಚೂರು ಜಿಲ್ಲೆ): ‘ಕುರುಬ ಸಮಾಜಕ್ಕೆ ಎಸ್‍.ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಲು ಪಕ್ಷಾತೀತವಾಗಿ ಕುರುಬ ಸಮಾಜದ ಎಲ್ಲ ನಾಯಕರು ಒಂದಾಗಿದ್ದೇವೆ. ಈ ಹೋರಾಟಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರೋಧವಿಲ್ಲ’ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಸೋಮವಾರ ಇಲ್ಲಿ ನಡೆದ ಸಮಾಜದ ವಿಭಾಗೀಯ ಸಭೆಗೂ ಮುನ್ನ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜದ ಸ್ವಾಮೀಜಿಗಳು ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಹೋರಾಟದಲ್ಲಿ ಭಾಗವಹಿಸಿ ಬೆಂಬಲ ಸೂಚಿಸುವಂತೆ ಕೋರಿದ್ದಾರೆ. ನಾನು ಕೂಡ ವೈಯಕ್ತಿಕವಾಗಿ ಅವರನ್ನು ಹೋರಾಟಕ್ಕೆ ಆಹ್ವಾನಿಸಿ
ದ್ದೇನೆ. ಹೋರಾಟಕ್ಕೆ ವಿರೋಧ ವ್ಯಕ್ತಪಡಿಸುವುದಿಲ್ಲ ಎಂದು ಅವರೂ ತಿಳಿಸಿದ್ದಾರೆ. ಹೀಗಾಗಿ ಹೋರಾಟ ದಾರಿ ತಪ್ಪುವ ಪ್ರಶ್ನೆಯೇ ಇಲ್ಲ’ ಎಂದರು.

‘ರಾಜಕೀಯ ಒತ್ತಡದ ಕೊರತೆ ಯಿಂದಾಗಿ ಈ ಮೀಸಲಾತಿ ಸಿಕ್ಕಿಲ್ಲ. ಈಗ ರಾಜಕೀಯ ಒತ್ತಡ ಹೇರುತ್ತೇವೆ. ಜ. 15ರಿಂದ ಕಾಗಿನೆಲೆಯಿಂದ ಶ್ರೀಗಳ ನೇತೃತ್ವದ ಪಾದಯಾತ್ರೆ ಆರಂಭ ವಾಗಲಿದೆ. ಬೆಂಗಳೂರಲ್ಲಿ 10 ಲಕ್ಷ ಜನರನ್ನು ಸೇರಿಸಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು. ಈಗಾಗಲೇ ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದ್ದು, ವರದಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳುವ ಭರವಸೆ ಇದೆ’ ಎಂದೂ ಅವರು ಹೇಳಿದರು.

‘ಈ ಬಗ್ಗೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಹೋಗಿದೆ. ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್‍ ಶಾ ಅವರ ಗಮನಸೆಳೆದು ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ  ಒತ್ತಾಯಿಸಲಾಗುವುದು’ ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು