ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ.ಪಂ ಚುನಾವಣೆ ಮುಂದೂಡುವುದಿಲ್ಲ: ರಾಜ್ಯ ಚುನಾವಣಾ ಆಯೋಗ

Last Updated 16 ಅಕ್ಟೋಬರ್ 2020, 21:02 IST
ಅಕ್ಷರ ಗಾತ್ರ

ಬೆಂಗಳೂರು: ‘ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮುಂದೂಡಬೇಕು ಎಂಬ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಮನವಿಯನ್ನು ಪರಿಗಣಿಸುವುದಿಲ್ಲ’ ಎಂದು ಹೈಕೋರ್ಟ್‌ಗೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ವಿವರಣೆ ನೀಡಿದ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ‘ಕೋವಿಡ್ ಕಾರಣದಿಂದ ಚುನಾವಣೆ ಮುಂದೂಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್‌ ಮನವಿ ಸಲ್ಲಿಸಿವೆ. ಆದರೆ, ಚುನಾವಣೆ ಮುಂದೂಡದಿರಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.

ಈಗಾಗಲೇ ಸಿದ್ಧಪಡಿಸಿರುವ ಚುನಾವಣಾ ವೇಳಾಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ ಅವರು, ‘ಜಿಲ್ಲಾ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಬಿಬಿಎಂಪಿ ಚುನಾವಣೆಗಳನ್ನು ಮುಂದಿನ ದಿನಗಳಲ್ಲಿ ನಡೆಸಬೇಕಿದೆ. ಹೀಗಾಗಿ, ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಲು ಆಗುವುದಿಲ್ಲ’ ಎಂದು ವಿವರಿಸಿದರು.

ಇದೇ ವೇಳೆ ಮತ್ತೊಬ್ಬ ಅರ್ಜಿದಾರರ ಪರ ಹಾಜರಾಗಿದ್ದ ವಕೀಲ ರವಿವರ್ಮ ಕುಮಾರ್, ‘ಗ್ರಾಮ ಪಂಚಾಯಿತಿ ಚುನಾವಣೆ ವಿಷಯದಲ್ಲಿ ರಾಜಕೀಯ ಪಕ್ಷಗಳು ಅಭಿಪ್ರಾಯ ನೀಡಬೇಕಿಲ್ಲ. ಏಕೆಂದರೆ ಪಕ್ಷಗಳ ಚಿಹ್ನೆಯಡಿ ಚುನಾವಣೆ ನಡೆಯುವುದಿಲ್ಲ’ ಎಂದು ಹೇಳಿದರು. ವಿಚಾರಣೆಯನ್ನು ಅ.21ಕ್ಕೆ ಪೀಠ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT