ಶುಕ್ರವಾರ, ಜುಲೈ 1, 2022
22 °C

ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಸುನಿಲ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ. ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಇಲ್ಲ’ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಈ ವಿಚಾರವಾಗಿ ಇಂಧನ ಸಚಿವರು ಬಿಡುಗಡೆ ಮಾಡಿರುವ ಹೇಳಿಕೆಯನ್ನು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

‘ರಾಜ್ಯದಲ್ಲಿ ಕಲ್ಲಿದ್ದಲು ಸರಬರಾಜು ಕೊರತೆ ಇದೆ ಎನ್ನುವುದು ಕಾಂಗ್ರೆಸ್ ಸೃಷ್ಟಿಸಿದ ಸುಳ್ಳು. ಕಲ್ಲಿದ್ದಲು ಸರಬರಾಜು ಆಗುತ್ತಿಲ್ಲ ಎಂಬುದು ಕಪೋಲಕಲ್ಪಿತ ಸುದ್ದಿ. ವಿದ್ಯುತ್ ಕೊರತೆ ನೀಗಿಸಲು ಆರು ತಿಂಗಳ ಮೊದಲೇ ಎಚ್ಚರಿಕೆ ತೆಗೆದುಕೊಂಡಿದ್ದೇವೆ. ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಎಲ್ಲವನ್ನೂ ವ್ಯವಸ್ಥಿತವಾಗಿ ನಡೆಸಿಕೊಂಡು ಬಂದಿದ್ದೇವೆ. ಸೋಲಾರ್ ಮತ್ತು ಪವನಶಕ್ತಿ ಹೆಚ್ಚು ಉತ್ಪಾದನೆಯಾಗುತ್ತಿದೆ. ಹೀಗಾಗಿ ಲೋಡ್‌ ಶೆಡ್ಡಿಂಗ್ ತೊಂದರೆ ಆಗಿಲ್ಲ. ಯಾವುದೇ ಕಾರಣಕ್ಕೂ ಅಂತಹ ಪರಿಸ್ಥಿತಿ ಎದುರಾಗದು. ಅನಗತ್ಯವಾಗಿ ಕಾಂಗ್ರೆಸ್ ಪಕ್ಷ ಸುಳ್ಳು ಸುದ್ದಿ ಹಬ್ಬಿಸುತ್ತಿದೆ’ ಎಂದು ಸಚಿವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು