ಮಂಗಳವಾರ, ಜನವರಿ 31, 2023
26 °C
ಅಲ್ಪಸಂಖ್ಯಾತ ಮಕ್ಕಳಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆ

ಅಲ್ಪಸಂಖ್ಯಾತ ಮಕ್ಕಳಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆಯ ಪ್ರಸ್ತಾವ ಇಲ್ಲ: ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ‘ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆ ಆರಂಭಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಭದ್ರಾವತಿ ಸಮೀಪದ ಕಾರೇಹಳ್ಳಿಯಲ್ಲಿ ಬಿಜಿಎಸ್‌ ಕೇಂದ್ರೀಯ ವಿದ್ಯಾಲಯ ಗುರುವಾರ ಹಮ್ಮಿಕೊಂಡಿದ್ದ ಕ್ರೀಡಾಕೂಟ ಉದ್ಘಾಟಿಸಲು ಬಂದಿದ್ದ ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಪ್ರತ್ಯೇಕ ಶಿಕ್ಷಣ ಸಂಸ್ಥೆ ವಿಚಾರ ಯಾರು ಹೇಳಿದ್ದಾರೋ ಗೊತ್ತಿಲ್ಲ. ಹಿಜಾಬ್ ವಿವಾದದ ನಂತರ ಕಾಲೇಜುಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆಯಾಗಿಲ್ಲ. ಮೊದಲಿನಂತೆಯೇ ಮಕ್ಕಳು ಕಲಿಯಲು ಬರುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು