ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯದಲ್ಲಿ ಭಗವದ್ಗೀತೆ ಸೇರಿಸುವ ಪ್ರಸ್ತಾವ ಇಲ್ಲ: ಜೆ.ಸಿ.ಮಾಧುಸ್ವಾಮಿ

Last Updated 20 ಮಾರ್ಚ್ 2022, 19:45 IST
ಅಕ್ಷರ ಗಾತ್ರ

ಮೈಸೂರು: ‘ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಹೀಗಿರುವಾಗ ಆ ವಿಷಯದ ಬಗ್ಗೆ ಚರ್ಚೆ ಅನಗತ್ಯ’ ಎಂದು ಕಾನೂನು ಸಚಿವಜೆ.ಸಿ.ಮಾಧುಸ್ವಾಮಿ ಹೇಳಿದರು.

ಭಾನುವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿ, ‘ಹಿಜಾಬ್‌ ವಿಚಾರದಲ್ಲಿ ಪರೀಕ್ಷೆಗೆ ಗೈರಾದರೆ ಮರುಪರೀಕ್ಷೆಗೆ ಅವಕಾಶವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆ ನಿಲುವಿನಲ್ಲಿ ಯಾವುದೇ ಬದಲಾವಣೆಯಲ್ಲ’ ಎಂದು ಅವರು ತಿಳಿಸಿದರು.

‘ಹೈಕೋರ್ಟ್‌ ತೀರ್ಪು ಪರವಾಗಿ ಬಂದಿಲ್ಲ ಎಂದಾದರೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಉಲ್ಲಂಘಿಸುವುದು, ಪ್ರತಿಭಟಿಸುವುದು ಸರಿಯಲ್ಲ. ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸುವುದು ನಮ್ಮ ಜವಾಬ್ದಾರಿ. ಈ ಕರ್ತವ್ಯದಲ್ಲಿ ವಿಫಲರಾಗಿ ಛೀಮಾರಿ ಹಾಕಿಸಿಕೊಳ್ಳಲು ನಾವು ತಯಾರಿಲ್ಲ’ ಎಂದು ತಿಳಿಸಿದರು.

‘ದಿ ಕಾಶ್ಮೀರ್‌ ಫೈಲ್ಸ್’ ನೋಡಲು ಯಾರಿಗೂ ಬಲವಂತ ಮಾಡುವುದಿಲ್ಲ. ಈ ಹಿಂದೆ ಏನು ನಡೆದಿತ್ತು ಎಂಬುದು ಜನರಿಗೆ ತಿಳಿಯಬೇಕು. ಕಾಶ್ಮೀರದ ಪಂಡಿತರು ಅನುಭವಿಸಿದ್ದ ನೋವನ್ನು ಸಿನಿಮಾ ಮಾಧ್ಯಮದ ಮೂಲಕ ಜನರಿಗೆ ತಿಳಿಸುವ ಕೆಲಸ ಆಗಿದೆ. ಅದರಲ್ಲಿ ತಪ್ಪೇನಿದೆ’ ಎಂದು ಅವರು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT