ಗುರುವಾರ , ಸೆಪ್ಟೆಂಬರ್ 16, 2021
25 °C

ವಾರಾಂತ್ಯದ ಕರ್ಫ್ಯೂ: ಬಸ್ ಸಂಚಾರಕ್ಕೆ ಇಲ್ಲ ಅಡ್ಡಿ

‍ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಬಸ್‌ಗಳ ಕಾರ್ಯಚರಣೆ ನಡೆಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.

ಕರ್ಫ್ಯೂ ಸಂದರ್ಭದಲ್ಲಿ ಬಹಳಷ್ಟು ಚಟುವಟಿಕೆಗಳನ್ನು ನಿಷೇಧಿಸಿರುವುದರಿಂದ ಅವಶ್ಯಕತೆಗಳಿಗೆ ತಕ್ಕಂತೆ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

‘ನಗರದಲ್ಲಿ ವಾಣಿಜ್ಯ ಚಟುವಟಿಕೆ ಮತ್ತು ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕಾರಣ ಬೆಂಗಳೂರು ನಗರದಲ್ಲಿ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಲಿದೆ. ಸದ್ಯ 4 ಸಾವಿರ ಬಸ್‌ಗಳು ಕಾರ್ಯಾಚರಣೆಯಲ್ಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಶೇ 30ರಷ್ಟು ಅಂದರೆ 1,200 ಬಸ್‌ಗಳನ್ನು ಮಾತ್ರ ರಸ್ತೆಗೆ ಇಳಿಸಲಾಗುವುದು’ ಎಂದು ಬಿಎಂಟಿಸಿ ವಿವರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು