ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಸಾರಿಗೆ ಸಂಸ್ಥೆಗಳಲ್ಲಿ ನೌಕರರಿಗೆ ಸಂಬಳ ಕೊಡುವಷ್ಟು ವರಮಾನ ಇನ್ನೂ ಸಂಗ್ರಹವಾಗುತ್ತಿಲ್ಲ. ವೇತನಕ್ಕೆ ಅನುದಾನ ಕೋರಿರುವ ಪ್ರಸ್ತಾವನೆ ಹಣಕಾಸು ಇಲಾಖೆಯಲ್ಲೇ ಬಾಕಿ ಇದ್ದು, ನವರಾತ್ರಿ ಹಬ್ಬವನ್ನು ನೌಕರರು ಬರಿಗೈನಲ್ಲೇ ಬರಮಾಡಿಕೊಳ್ಳಬೇಕಾದ ಸ್ಥಿತಿ ಇದೆ.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರತಿನಿತ್ಯ ಪ್ರಯಾಣಿಕರ ಸಂಖ್ಯೆ ಕೋವಿಡ್ ಪೂರ್ವದಲ್ಲಿ 30 ಲಕ್ಷ ಇತ್ತು. ದಿನದ ವರಮಾನ ₹ 9.50 ಕೋಟಿ ಇತ್ತು. ಸದ್ಯ ಪ್ರಯಾಣಿಕರ ಸಂಖ್ಯೆ ಸರಾಸರಿ 19 ಲಕ್ಷ ಇದ್ದರೆ, ವರಮಾನ ₹6.50 ಕೋಟಿ ಇದೆ.

ಬಿಎಂಟಿಸಿ ಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ಕೋವಿಡ್ ಪೂರ್ವದಲ್ಲಿ ಪ್ರತಿದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಚರಿಸುತ್ತಿದ್ದರು. ₹3.5 ಕೋಟಿ ವರಮಾನ ಸಂಗ್ರಹ ಆಗುತ್ತಿತ್ತು. ಈಗ ಪ್ರಯಾಣಿಕರ ಸಂಖ್ಯೆ 17 ಲಕ್ಷದಿಂದ 20 ಲಕ್ಷದ ತನಕ ಇದೆ. ವರಮಾನ ಸಂಗ್ರಹ ₹2.2 ಕೋಟಿಯಷ್ಟಿದೆ.

ದುಬಾರಿಯಾಗಿರುವ ಡೀಸೆಲ್ ವೆಚ್ಚ ಮತ್ತು ನಿರ್ವಹಣೆ ವೆಚ್ಚ ಸರಿದೂಗಿಸಿಕೊಳ್ಳಲು ಈ ವರಮಾನ ಸಾಕಾಗುತ್ತಿದೆ. ಎಲ್ಲ ನೌಕರರಿಗೂ ಸ್ವಂತ ಶಕ್ತಿಯಿಂದ ಸಂಬಳ ನೀಡುಷ್ಟು ವರಮಾನ ಬರುತ್ತಿಲ್ಲ ಎನ್ನುತ್ತಾರೆ ನಿಗಮಗಳ ಅಧಿಕಾರಿಗಳು.

ನೌಕರರ ವೇತನ ಪಾವತಿಸಲು ಸರ್ಕಾರದ ಮುಂದೆ ಅನುದಾನಕ್ಕೆ ಸಾರಿಗೆ ಸಂಸ್ಥೆಗಳು ಕೋರಿಕೆ ಸಲ್ಲಿಸಿವೆ. ಹಣಕಾಸು ಇಲಾಖೆಯ ಮುಂದೆ ಪ್ರಸ್ತಾವನೆ ಇದ್ದು, ಮುಖ್ಯಮಂತ್ರಿ ಅವರಿಂದ ಇನ್ನೂ ಅನುಮೋದನೆ ದೊರೆತಿಲ್ಲ.

‘ಹಣಕಾಸು ಇಲಾಖೆ ಜೊತೆ ಮಾತು ಕತೆ ನಡೆಸಲಾಗಿದ್ದು, ಮುಖ್ಯಮಂತ್ರಿ ಅವರ ಗಮನಕ್ಕೂ ತರಲಾಗಿದೆ. ಸರ್ಕಾರದಿಂದ ಅನುದಾನ ದೊರೆಯುವ ನಿರೀಕ್ಷೆಯಲ್ಲಿದ್ದೇವೆ. ನವರಾತ್ರಿ ಹಬ್ಬಕ್ಕೂ ಮುನ್ನ ನೌಕರರಿಗೆ ಸಂಬಳ ನೀಡಲು ಪ್ರಯತ್ನಿಸಲಾಗುತ್ತಿದೆ’ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.