ಶನಿವಾರ, ಅಕ್ಟೋಬರ್ 24, 2020
24 °C

ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭ ಇಲ್ಲ: ಸಚಿವ ಡಾ.ಕೆ.ಸುಧಾಕರ್‌ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ‘ಶಾಲೆಗಳನ್ನು ಪುನರಾರಂಭಿಸುವ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯವು ಮಾರ್ಗಸೂಚಿ ಪ್ರಕಟಿಸಿದ್ದರೂ ರಾಜ್ಯದಲ್ಲಿ ಕೋವಿಡ್‌–19 ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವ ಚಿಂತನೆ ರಾಜ್ಯ ಸರ್ಕಾರದ ಮುಂದೆ ಇಲ್ಲ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಇಲ್ಲಿ ಹೇಳಿದರು.

‘ಕೊರೊನಾದ ಮಧ್ಯಂತರ ಅವಧಿಯಲ್ಲಿ ರಾಜ್ಯವಿದೆ. ಎರಡು ತಿಂಗಳಿಂದ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಶಾಲೆ ಆರಂಭಿಸುವ ಕುರಿತು ತಜ್ಞರ ಸಲಹೆ ಪಡೆಯಲಾಗಿದ್ದು, ಶಾಲೆ ಆರಂಭಿಸುವುದಕ್ಕೆ ಇದು ಸೂಕ್ತ ಸಮಯವಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ. ಆದ್ದರಿಂದ, ಇನ್ನೂ ಮೂರು ವಾರಗಳ ಕಾಲ ಪರಿಸ್ಥಿತಿ ಅವಲೋಕಿಸಲಾಗುವುದು. ಬಳಿಕ, ಪಕ್ಕದ ರಾಜ್ಯಗಳ ಪರಿಸ್ಥಿತಿ ಗಮನಿಸಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು