ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರ‍್ಯಾಲಿಯಲ್ಲಿ ಟ್ರ್ಯಾಕ್ಟರ್‌ಗೆ ಅವಕಾಶವಿಲ್ಲ: ಕಮಲ್‌ ಪಂತ್‌

Last Updated 25 ಜನವರಿ 2021, 18:49 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ಈ ಹಿಂದೆ ನಡೆದ ಯಾವುದೇ ರ‍್ಯಾಲಿ ಅಥವಾ ಪ್ರತಿಭಟನೆಯಲ್ಲೂ ಟ್ರ್ಯಾಕ್ಟರ್‌ಗಳಿಗೆ ಅವಕಾಶ ನೀಡಿಲ್ಲ. ಮಂಗಳವಾರ ನಗರದಲ್ಲಿ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸಲು ಇದುವರೆಗೂ ಅನುಮತಿ ನೀಡಿಲ್ಲ’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಗಣರಾಜ್ಯೋತ್ಸವ ಭದ್ರತೆ ಸಂಬಂಧ ಅಧಿಕಾರಿಗಳ ಸಭೆ ನಡೆಸಲಾಯಿತು. ಇದೇ ವೇಳೆಯೇ ಟ್ರ್ಯಾಕ್ಟರ್ ರ‍್ಯಾಲಿ ಬಗ್ಗೆಯೂ ಚರ್ಚೆ ಆಯಿತು’ ಎಂದರು.

'ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಮಾಡುವುದಾಗಿ ಕೆಲ ಸಂಘಟನೆ ಯವರು ಮನವಿ ಸಲ್ಲಿಸಿದ್ದಾರೆ. ಹೊರಗಿ ನಿಂದ ರ‍್ಯಾಲಿ ಮೂಲಕ ನಗರದೊಳಗೆ ಬಂದು ಪ್ರತಿಭಟನಾ ಸಭೆ ಮಾಡುವು ದಾಗಿಯೂ ಮತ್ತಷ್ಟು ಸಂಘಟನೆಯವರು ಕೋರಿದ್ದಾರೆ. ಆದರೆ, ಹೇಗೆ ಬರುತ್ತಾರೆ? ಎಂಬ ಬಗ್ಗೆ ನಿರ್ದಿಷ್ಟವಾಗಿ ಹೇಳಿಲ್ಲ. ಎರಡೂ ಮನವಿಗಳನ್ನೂ ಪರಿಶೀಲಿಸಲಾ ಗುತ್ತಿದೆ’ ಎಂದೂ ಅವರು ಹೇಳಿದರು.

‘ಕಾರು, ಜೀಪು ಅಥವಾ ಬಸ್ಸಿನಲ್ಲಿ ಬಂದು ಪ್ರತಿಭಟನೆ ಮಾಡುವುದಕ್ಕೆ ಯಾವುದೇ ತೊಂದರೆ ಇರುವುದಿಲ್ಲ. ಆದರೆ, ಯಾರಿಗೂ ಟ್ರ್ಯಾಕ್ಟರ್‌ ತರಲು ಇದುವರೆಗೂ ಅವಕಾಶ ಕೊಟ್ಟಿಲ್ಲ’ ಎಂದರು.

ಬಿಗಿ ಭದ್ರತೆ: ‘ಗಣರಾಜ್ಯೋತ್ಸವದ ಅಂಗವಾಗಿ ನಗರದ ಮಾಣೆಕ್‌ ಷಾ ಮೈದಾನದಲ್ಲಿ ಪರೇಡ್‌ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ’ ಎಂದು ಕಮಲ್ ಪಂತ್ ಹೇಳಿದರು.

‘ಒಂದು ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನೂ ಭದ್ರತೆ ನಿಯೋಜಿಸ ಲಾಗಿದೆ. ಕೆಲ ಸಂಘಟನೆಯವರೂ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದು, ಪರಿಸ್ಥಿತಿ ನೋಡಿಕೊಂಡು ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗುವುದು’ ಎಂದೂ ಅವರು ತಿಳಿಸಿದರು.

‘ಟ್ರ್ಯಾಕ್ಟರ್‌ಗೆ ಅವಕಾಶ ನೀಡದಿದ್ದರೆ ಹೆದ್ದಾರಿ ಬಂದ್’:‘ನಗರಕ್ಕೆ ಟ್ರ್ಯಾಕ್ಟರ್ ತರಲು ಅವಕಾಶ ನೀಡದಿದ್ದರೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲಾಗುವುದು’ ಎಂದು ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

‘ಗಣರಾಜ್ಯೋತ್ಸವ ಆಚರಣೆಗೆ ನಮ್ಮಿಂದ ಯಾವುದೇ ಧಕ್ಕೆ ಆಗುವು ದಿಲ್ಲ. ಶಾಂತ ರೀತಿಯಲ್ಲಿ ಟ್ರ್ಯಾಕ್ಟರ್, ಬೈಕ್, ಖಾಸಗಿ ವಾಹನಗಳಲ್ಲಿ ರ‍್ಯಾಲಿ ನಡೆಸಲಿದ್ದೇವೆ’ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹೇಳಿದರು.

ಟ್ರ್ಯಾಕ್ಟರ್‌ ರ್‍ಯಾಲಿ ಇಂದು

ನವದೆಹಲಿ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಟ್ರ್ಯಾಕ್ಟರ್‌ ರ್‍ಯಾಲಿಯು ಮಂಗಳವಾರ ಗಣರಾಜ್ಯೋತ್ಸವ ಸಮಾರಂಭ ಮುಗಿದ ಬಳಿಕ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ದೆಹಲಿಯ ಟಿಕ್ರಿ, ಗಾಜಿಪುರ, ಸಿಂಘು ಮತ್ತು ಚಿಲ್ಲಾ ಗಡಿಗಳಲ್ಲಿ ಸಾವಿರಾರು ಟ್ರ್ಯಾಕ್ಟರ್‌ಗಳು ಬಂದು ಸೇರಿವೆ.

ರ್‍ಯಾಲಿಯಲ್ಲಿ ಸುಮಾರು ಎರಡು ಲಕ್ಷ ಟ್ರ್ಯಾಕ್ಟರ್‌ಗಳು ಭಾಗವಹಿಸಲಿವೆ ಎಂದು ರೈತ ಮುಖಂಡರು ಹೇಳಿದ್ದಾರೆ. ಆದರೆ, ರ್‍ಯಾಲಿಗೆ ಷರತ್ತುಗಳನ್ನು ಹಾಕಿರುವ ದೆಹಲಿ ಪೊಲೀಸರು, ಐದು ಸಾವಿರ ಟ್ರ್ಯಾಕ್ಟರ್‌ಗಳಿಗೆ ಮಾತ್ರ ಅವಕಾಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಯಾವುದೇ ರೀತಿಯ ಹಿಂಸಾಚಾರ ನಡೆಯಬಾರದು ಎಂದು ರ್‍ಯಾಲಿಯಲ್ಲಿ ಭಾಗವಹಿಸುವ ರೈತರಿಗೆ ರೈತರ ಸಂಘಟನೆಗಳು ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT