ಬೆಂಗಳೂರು: ‘ಕೊರೊನಾ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಬವಣೆಪಡುವಂತಾಗಿದೆ. ಸೋಮವಾರದಿಂದ ಜಾರಿಗೆ ಬರಲಿರುವ ಲಾಕ್ಡೌನ್ ಗೊಂದಲದ ಗೂಡಾಗಿದ್ದು, ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ‘ಪರಿಷ್ಕೃತ ಲಾಕ್ಡೌನ್ ಅನ್ವಯ ಬೆಳಿಗ್ಗೆ 6ರಿಂದ 10ವರೆಗೆ ದಿನಸಿ, ತರಕಾರಿ, ಮೀನು-ಮಾಂಸದ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು ಸರ್ಕಾರದ ಮೂರ್ಖತನದ ನಿರ್ಧಾರ’ ಎಂದಿದ್ದಾರೆ.

‘ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2-3 ಕಿ.ಮೀ. ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಯವರೇ. ಆಯಾಸ-ಪ್ರಯಾಸದಿಂದ ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ. ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ’ ಎಂದೂ ಪ್ರಶ್ನಿಸಿದ್ದಾರೆ.

‘ಹೊಸ ಲಾಕ್ಡೌನ್ ನಿಯಮಾವಳಿ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕು, ಎಟಿಎಂ ಆಸ್ಪತ್ರೆ ತೆರೆದಿರುತ್ತದೆ. ಆದರೆ, ಅಲ್ಲಿಗೆ ಗ್ರಾಹಕರು ಮತ್ತು ಅಸ್ವಸ್ಥರು ವಾಹನ ಬಳಸಲು ನಿಷೇಧ ಇದೆ. ಹೊಟೇಲ್ನಲ್ಲಿ ಪಾರ್ಸಲ್ಗೆ ಅವಕಾಶ ಇದೆ. ವಾಹನ ಮಾತ್ರ ಬಳಸುವಂತಿಲ್ಲ. ಇದೆಂತಹ ತುಘಲಕ್ ಸರ್ಕಾರ’ ಎಂದೂ ವಾಗ್ದಾಳಿ ನಡೆಸಿದ್ದಾರೆ.

‘ಹೊಸ ಲಾಕ್ ಡೌನ್ ಜಾರಿಗೆ ತರಲು ಹೊರಟಿರುವ ರಾಜ್ಯದ ಆಡಳಿತಗಾರರು ಮತ್ತು ಅಧಿಕಾರಿಗಳು ಮೊದಲು ಬೆಂಗಳೂರಿನ ಹವಾನಿಯಂತ್ರಿತ ಕಚೇರಿಯಿಂದ ಹೊರಬಂದು ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಲಿ. ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ. ಆದರೆ, ಮುಖ್ಯಮಂತ್ರಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು. ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು’ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.