ಬುಧವಾರ, ಸೆಪ್ಟೆಂಬರ್ 29, 2021
20 °C

ಕಲ್ಯಾಣ, ಉತ್ತರ ಕರ್ನಾಟಕ ಆರ್ಯ ಈಡಿಗ ಸಮಾವೇಶ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಂಗಾವತಿ (ಕೊಪ್ಪಳ ಜಿಲ್ಲೆ): ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಆರ್ಯ ಈಡಿಗ ಸಮುದಾಯದ ಚಿಂತನ-ಮಂಥನ ಸಮಾವೇಶವನ್ನು ಜು.25ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿಯ ಶ್ರೀಕ್ಷೇತ್ರ ಹೇಮಗುಡ್ಡದ ದುರ್ಗಾ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ರಾಜ್ಯ ಘಟಕದ ಅಧ್ಯಕ್ಷ ತಿಮ್ಮೇಗೌಡ ಅವರು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾರಂಭ ಉದ್ಘಾಟಿಸುವರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ, ಪ್ರಣವಾನಂದ ಸ್ವಾಮೀಜಿ ಪಾಲ್ಗೊಳ್ಳುವರು. ಈ ಭಾಗದ ಸಮಾಜದ 3 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ.

‘ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ, ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಸರ್ಕಾರ ತನ್ನ ವಶಕ್ಕೆ ಪಡೆಯುವುದಕ್ಕೆ ವಿರೋಧ, ರಾಜಕೀಯ ಪ್ರಾತಿನಿಧ್ಯ ಸೇರಿದಂತೆ ವಿವಿಧ  ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು’ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌.ಶ್ರೀನಾಥ್ ತಿಳಿಸಿದ್ದಾರೆ.

‘ರಾಜ್ಯದಲ್ಲಿ 80 ಲಕ್ಷ ಜನಸಂಖ್ಯೆ ಹೊಂದಿರುವ ಆರ್ಯ ಈಡಿಗ ಸಮುದಾಯವು ಶಿಕ್ಷಣ, ಉದ್ಯೋಗ, ವ್ಯಾಪಾರ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿದೆ. ಕುಲ ಕಸುಬಾದ ಸೇಂದಿ ಇಳಿಸುವುದನ್ನು ನಿಲ್ಲಿಸಿದ ಬಳಿಕ ಈಡಿಗ ಸಮಾಜದವರು ಸಂಕಷ್ಟದಲ್ಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.