ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ರಾಜ್ಯ ಹೇಳಿಕೆ: ಉಮೇಶ ಕತ್ತಿ ವಜಾಗೊಳಿಸಲು ಡಿ.ಕೆ.ಶಿವಕುಮಾರ್‌ ಆಗ್ರಹ

Last Updated 24 ಜೂನ್ 2022, 10:00 IST
ಅಕ್ಷರ ಗಾತ್ರ

ಬೆಂಗಳೂರು: ಪ್ರತ್ಯೇಕ ರಾಜ್ಯದ ವಿಚಾರವಾಗಿ ಮಾತನಾಡಿರುವ ಸಚಿವ ಉಮೇಶ ಕತ್ತಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಅವರು, ‘ಲೋಕಸಭಾ ಚುನಾವಣೆಯ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದಿರುವ ಸಚಿವ ಉಮೇಶ್ ಕತ್ತಿ ಅವರನ್ನು ಮುಖ್ಯಮಂತ್ರಿಗಳು ಈ ಕೂಡಲೇ ಸಂಪುಟದಿಂದ ವಜಾ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಸಚಿವರು ಏಕೀಕೃತ ಕರ್ನಾಟಕದ ವಿರುದ್ಧ ಕತ್ತಿ ಬೀಸುತ್ತಲೇ ಇದ್ದರೂ ತುಟಿ ಬಿಚ್ಚದ ಬಿಜೆಪಿ ಸರ್ಕಾರಕ್ಕೆ ನಾಚಿಕೆಯಾಗಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕರ್ನಾಟಕದಲ್ಲಿ ಹುಟ್ಟಿ ಇದೇ ನೆಲದ ನೀರು, ಅನ್ನ ಸೇವಿಸಿ ಈಗ ಇದೇ ನೆಲಕ್ಕೆ ಬಿಜೆಪಿ ನಾಯಕರು ದ್ರೋಹ ಬಗೆಯುತ್ತಿದ್ದಾರೆ. ತಾಯಿ ನೆಲವನ್ನು ಅವಮಾನಿಸುವುದು ಒಂದೇ, ಹೆತ್ತ ತಾಯಿಯನ್ನು ಅವಮಾನಿಸುವುದು ಒಂದೇ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಉತ್ತರ ಕರ್ನಾಟಕ ಇಂದಿಗೂ ಎಂದಿಗೂ ಕರ್ನಾಟಕದ ಭಾಗವಾಗೇ ಉಳಿಯುತ್ತದೆ. ಕರ್ನಾಟಕದಿಂದ ಬೇರ್ಪಡಿಸಲು ಸಾಧ್ಯವೇ ಇಲ್ಲ. ಇದು ಕಾಂಗ್ರೆಸ್ ಪ್ರತಿಜ್ಞೆ’ ಎಂದು ಡಿಕೆಶಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT