ಬೆಂಗಳೂರು: ‘ಸಾರ್ವಜನಿಕರ ಅಭಿಪ್ರಾಯಕ್ಕೆ ವಿರುದ್ಧವಾಗಿ ಯಾವುದೇ ಪ್ರದೇಶವನ್ನು ಅರಣ್ಯ ಪ್ರದೇಶವೆಂದು ಘೋಷಿಸುವುದಿಲ್ಲ’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿಯ ವಿರೂಪಾಕ್ಷಪ್ಪ ಮಾಡಾಳು, ‘ಚನ್ನಗಿರಿ ತಾಲ್ಲೂಕಿನ ಕುಕ್ಕುವಾಡದ ಸುಮಾರು 33 ಸಾವಿರ ಹೆಕ್ಟೇರ್ ಪ್ರದೇಶವನ್ನು ಜನರ ಅಭಿಪ್ರಾಯಕ್ಕೆ ವಿರುದ್ದವಾಗಿ ಅರಣ್ಯ ಪ್ರದೇಶವನ್ನಾಗಿ ಘೋಷಿಸಬಾರದು’ ಎಂದು ಒತ್ತಾಯಿಸಿದರು.
ಅದಕ್ಕೆ ಉತ್ತರಿಸಿದ ಸಚಿವರು, ‘ಈ ಪ್ರದೇಶವನ್ನು ಮೀಸಲು ವನ್ಯಜೀವಿ ಅರಣ್ಯ ಎಂದು ಘೋಷಿಸಲು ಸಾರ್ವಜನಿಕರ ವಿರೋಧವಿದ್ದರೆ, ಆ ಅಭಿಪ್ರಾಯಕ್ಕೆ ವಿರುದ್ಧವಾಗಿ ಸರ್ಕಾರ ಹೋಗುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.