ನವದೆಹಲಿ: ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಒಂದು ತಿಂಗಳ ಕಾಲಾವಕಾಶ ನೀಡಿದೆ. ಹೀಗಾಗಿ, ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲು ಯಾವುದೇ ಆತುರವಿಲ್ಲ ಎಂದು ಭಾರತೀಯ ಚುನಾವಣಾ ಆಯೋಗ ಬುಧವಾರ ಹೇಳಿದೆ.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘ವಿಚಾರಣಾ ನ್ಯಾಯಾಲಯದ ಮುಂದಿನ ಆದೇಶದವರೆಗೆ ನಾವು ಕಾಯುತ್ತೇವೆ. ಫೆಬ್ರುವರಿವರೆಗೆ ತೆರವಾಗಿರುವ ಸ್ಥಾನಗಳ ಆಧಾರದಲ್ಲಿ ಲೋಕಸಭೆ ಹಾಗೂ ವಿಧಾನಸಭೆಗಳ ಉಪಚುನಾವಣೆ ಘೋಷಣೆಗೆ ಆಯೋಗ ನಿರ್ಧಾರ ಕೈಗೊಂಡಿದೆ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.