ಗುರುವಾರ , ಜನವರಿ 28, 2021
23 °C

ಪಂಚಾಯಿತಿ ಚುನಾವಣೆ: ಉಸ್ತುವಾರಿ ವಹಿಸಿಕೊಳ್ಳುವುದಿಲ್ಲ -ಜಿಟಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಗ್ರಾಮ ಪಂಚಾಯಿತಿ ಚುನಾವಣೆಯು ಪಕ್ಷಗಳ ಬ್ಯಾನರ್‌ನಡಿ ನಡೆಯುವುದಿಲ್ಲ. ಹೀಗಾಗಿ, ನಾನು ಈ ಚುನಾವಣೆಯ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ, ಉಸ್ತುವಾರಿಯನ್ನೂ ವಹಿಸಿಕೊಳ್ಳುವುದಿಲ್ಲ’ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಭಾನುವಾರ ಇಲ್ಲಿ ಹೇಳಿದರು.

‘ಚುನಾವಣೆ ಸಂಬಂಧ ಜೆಡಿಎಸ್‌ ಪೂರ್ವಭಾವಿ ಸಭೆಗೆ ನನ್ನನ್ನು ಆಹ್ವಾನಿಸಿಲ್ಲ. ಕರೆದರೂ ಹೋಗುವುದಿಲ್ಲ’ ಎಂದು ತಿಳಿಸಿದರು.

ಪಂಚಾಯಿತಿ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದ ಬದಲು ಹುಣಸೂರಿನ ಉಸ್ತುವಾರಿ ನೀಡಿದ್ದರ ಬಗ್ಗೆ ಪ್ರತಿಕ್ರಿಯಿಸಿ, ‘ಈ ಬಗ್ಗೆ ನನಗೆ ಯಾವುದೇ ಮಾಹಿತಿ ಬಂದಿಲ್ಲ. ಚಾಮುಂಡೇಶ್ವರಿ ಅಥವಾ ಹುಣಸೂರು ಕ್ಷೇತ್ರದ ಉಸ್ತುವಾರಿ ವಹಿಸಿಕೊಳ್ಳುವುದಿಲ್ಲ’ ಎಂದರು.

ಈ ನಡುವೆ, ಶಾಸಕ ಸಾ.ರಾ.ಮಹೇಶ್‌ ಅವರು ಭಾನುವಾರ ಜಿ.ಟಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಜಿ.ಟಿ.ದೇವೇಗೌಡ ಅವರು ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡ ಬಳಿಕ ಇವರು ಭೇಟಿಯಾಗಿದ್ದು ಇದೇ ಮೊದಲು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು