ಬೆಂಗಳೂರು:ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಸೆ.6ರಿಂದ ಕಡ್ಡಾಯವಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸಬೇಕು, ಪ್ರತಿದಿನದ ವಿದ್ಯಾರ್ಥಿಗಳ ಹಾಜರಾತಿಯ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ದಾಖಲಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ಸಂಬಂಧ ಶುಕ್ರವಾರ ಸುತ್ತೋಲೆ ಹೊರಡಿಸಿರುವ ಇಲಾಖೆಯು, ಕಳೆದ ಆ.23ರಿಂದಲೇ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸಲು ಸರ್ಕಾರದ ಆದೇಶದಂತೆ ಅನುಮತಿ ನೀಡಲಾಗಿದ್ದರೂ ಪ್ರಥಮ ಪಿಯು ದಾಖಲಾತಿ ಪ್ರಕ್ರಿಯೆ ನಡೆಯುತ್ತಿದ್ದ ಕಾರಣ ಇನ್ನೂ ಸಾಕಷ್ಟು ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಆರಂಭವಾಗಿಲ್ಲ.
ಯಾವುದೇ ಕಾಲೇಜುಗಳು ಭೌತಿಕ ತರಗತಿಗಳನ್ನು ನಡೆಸದಿರುವುದು ಕಂಡುಬಂದರೆ ಆಯಾ ಜಿಲ್ಲಾ ಉಪನಿರ್ದೇಶಕರು ಕಾಲೇಜುಗಳಿಗೆ ಭೇಟಿ ನೀಡಿ ತರಗತಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಪಿಯು ಇಲಾಖೆಯ ನಿರ್ದೇಶಕಿ ಆರ್. ಸ್ನೇಹಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.