ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಆರ್‌ಪಿ ಪ್ರಕಟಿಸದ ಕಂಪನಿಗಳಿಗೆ ನೋಟಿಸ್‌

Last Updated 8 ಆಗಸ್ಟ್ 2021, 16:25 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರದ ಸಹಾಯಧನ ಯೋಜನೆಗಳ ಅಡಿಯಲ್ಲಿ ಪೂರೈಕೆಯಾಗುವ ಕೃಷಿ ಯಂತ್ರೋಪಕರಣಗಳ ಗರಿಷ್ಠ ಮಾರಾಟ ದರವನ್ನು (ಎಂಆರ್‌ಪಿ) ವೆಬ್‌ಸೈಟ್‌ಗಳಲ್ಲಿ ಪ್ರಕಟಿಸದ 21 ಕಂಪನಿಗಳಿಗೆ ಕೃಷಿ ಇಲಾಖೆಯ ಆಯುಕ್ತರು ನೋಟಿಸ್‌ ಜಾರಿ ಮಾಡಿದ್ದಾರೆ.

ವಿವಿಧ ಯೋಜನೆಗಳ ಅಡಿಯಲ್ಲಿ ಪೂರೈಕೆಯಾಗುವ ಕೃಷಿ ಯಂತ್ರೋಪಕರಣಗಳ ಉತ್ಪಾದಕರು ಗರಿಷ್ಠ ಮಾರಾಟ ದರವನ್ನು ವೆಬ್‌ಸೈಟ್‌ನಲ್ಲಿ ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸಿ ಮೇ 11 ರಂದು ಆದೇಶ ಹೊರಡಿಸಲಾಗಿತ್ತು. ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದ್ದಾರೆ. ಆ ಬಳಿಕ ಕೃಷಿ ಆಯುಕ್ತರು ಕ್ರಮ ಕೈಗೊಂಡಿದ್ದಾರೆ.

ಈವೆರಗೂ ತಮ್ಮ ಉತ್ಪನ್ನಗಳ ಗರಿಷ್ಠ ಮಾರಾಟ ದರ ಪ್ರಕಟಿಸದ 21 ಕಂಪನಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಆಗಸ್ಟ್‌ 16 ರೊಳಗೆ ದರವನ್ನು ಪ್ರಕಟಿಸಿ, ವರದಿ ನೀಡುವಂತೆ ಸೂಚಿಸಲಾಗಿದೆ. ಗಡುವಿನೊಳಗೆ ಸೂಚನೆ ಪಾಲಿಸದೇ ಇದ್ದಲ್ಲಿ, ಅಂತಹ ಕಂಪನಿಗಳನ್ನು ಸರ್ಕಾರದ ಯೋಜನೆಗಳ ಅಡಿಯಲ್ಲಿ ಯಂತ್ರೋಪಕರಣ ಪೂರೈಸುವ ಉತ್ಪಾದಕರ ಪಟ್ಟಿಯಿಂದ ಕೈಬಿಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT