ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ವಿಮೆ ಪರಿಹಾರ: ಶೀಘ್ರ ಇತ್ಯರ್ಥಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ ಸೂಚನೆ

Last Updated 10 ನವೆಂಬರ್ 2022, 19:37 IST
ಅಕ್ಷರ ಗಾತ್ರ

ಬೆಂಗಳೂರು: 2022– 23 ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನ ರೈತರ ಬೆಳೆ ವಿಮೆ ಪರಿಹಾರ ಪಾವತಿಯನ್ನು ಡಿಸೆಂಬರ್‌ ಅಂತ್ಯದೊಳಗೆ ಇತ್ಯರ್ಥಪಡಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದಲ್ಲಿ ಗುರುವಾರ ಬೆಳೆವಿಮೆ ಪರಿಹಾರ ಪಾವತಿ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಿ ಅವರು ಮಾತನಾಡಿದರು.

ಯಾವುದೇ ಕಾರಣಕ್ಕೂ ಬೆಳೆ ವಿಮೆ ಪರಿಹಾರ ಪಾವತಿ ತಡವಾಗಬಾರದು. ರೈತರು ವಿಮೆಗಾಗಿ ಕಾದು ಕುಳಿತಿರುತ್ತಾರೆ.ಕೃಷಿ ಅಧಿಕಾರಿಗಳು ವಿಮಾ ಕಂಪೆನಿಗಳೊಂದಿಗೆ ನಿರಂತರ ಸಂಪರ್ಕವನ್ನು ಹೊಂದಿರಬೇಕು ಎಂದು ಹೇಳಿದರು.

ಆಧಾರ್‌ ಕಾರ್ಡ್‌ ಜೋಡಣೆ ಆಗದೇ ಇರುವ ರೈತರ ಸಂಖ್ಯೆ ಸಾಕಷ್ಟು ಇರುವುದನ್ನು ಗಮನಿಸಿದ ಅವರು, ‘ಬೆಳೆ ವಿಮೆಗೆ ಆಧಾರ್‌ ಕಾರ್ಡ್‌ ಜೋಡಣೆ ಆಗಿದೆಯೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ವಿಮಾ ಕಂಪನಿಗಳೊಂದಿಗೆ ಆಧಾರ್‌ನಲ್ಲಿ ಏನಾದರೂ ತಿದ್ದುಪಡಿ ಆಗಿದ್ದಲ್ಲಿ ಅದನ್ನು ನನ್ನ ಗಮನಕ್ಕೆ ತರಬೇಕು. ರೈತರೂ ಇದನ್ನು ಗಮನಿಸಬೇಕು’ ಎಂದೂ ಸಲಹೆ ನೀಡಿದರು.

ಮುಂಗಾರು ಹಂಗಾಮಿನ ಬೆಳೆಗಳಿಗೆ ಜನವರಿಯಲ್ಲಿ ವಿಮೆ ಪರಿಹಾರ ಪಾವತಿಯನ್ನು ಇತ್ಯರ್ಥಪಡಿಸಲು ಪ್ರಕ್ರಿಯೆ ಆರಂಭಿಸುವಂತೆಯೂ ಪಾಟೀಲ ಸೂಚಿಸಿದರು. ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಕಳಸದ, ಆಯುಕ್ತ ಪಿ.ಶರತ್‌ ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT