ಮಂಗಳವಾರ, ಆಗಸ್ಟ್ 16, 2022
30 °C

ವಿಜಯನಗರ ಜಿಲ್ಲೆ ರಚನೆ;ಸರ್ಕಾರದಿಂದ ಅಧಿಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಹೊಸಪೇಟೆ ಜಿಲ್ಲಾ ಕೇಂದ್ರವಾಗಿ ಇಟ್ಟುಕೊಂಡು ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.

ನೂತನ ವಿಜಯನಗರ ಜಿಲ್ಲಾ ವ್ಯಾಪ್ತಿಗೆ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಹಾಗೂ ಹರಪನಹಳ್ಳಿ ಸೇರಲಿವೆ. ಇನ್ನು ಬಳ್ಳಾರಿ ಜಿಲ್ಲೆ ವ್ಯಾಪ್ತಿಗೆ ಬಳ್ಳಾರಿ, ಕುರುಗೋಡು, ಸಿರುಗುಪ್ಪ, ಕಂಪ್ಲಿ ಹಾಗೂ ಸಂಡೂರು ಸೇರಿಸಿ ಜಿಲ್ಲೆಯ ಸರಹದ್ದು ಗೊತ್ತು ಮಾಡಿದೆ.

ಈ ಸಂಬಂಧ ಯಾವುದೇ ರೀತಿಯ ಆಕ್ಷೇಪಣೆ, ಸಲಹೆಗಳಿದ್ದರೆ ಒಂದು ತಿಂಗಳ ಒಳಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ 505, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್‌. ಅಂಬೇಡ್ಕರ್‌ ರಸ್ತೆ, ಬೆಂಗಳೂರು–560001 ಈ ವಿಳಾಸಕ್ಕೆ ಲಿಖಿತ ರೂಪದಲ್ಲಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು