ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತ್ ರಾಜ್ಯಕ್ಕೆ ಸ್ಥಳಾಂತರ ಮಾಡುವ ಪ್ರಸ್ತಾವ ವಿರೋಧಿಸಿ ಎನ್ಎಸ್‌ಯುಐಕಾರ್ಯಕರ್ತರು ಇಸ್ರೊ ಕೇಂದ್ರ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, 'ಕೇಂದ್ರ ಸರ್ಕಾರವು ಕರ್ನಾಟಕದಿಂದ ಪ್ರಮುಖ ಸಂಸ್ಥೆಗಳು ಮತ್ತು ಯೋಜನೆಗಳನ್ನು ಸ್ಥಳಾಂತರಿಸಲು ಪ್ರಯತ್ನಿಸುತ್ತಿದೆ. ಇದು ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ' ಎಂದರು.

ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದಲೇ ನಿರ್ವಹಣೆ ಮಾಡಬೇಕು. ಸ್ಥಳಾಂತರದ ಪ್ರಸ್ತಾವವನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿದರು.

ಶಾಸಕ ಕೃಷ್ಣ ಬೈರೇಗೌಡ, ಎನ್ಎಸ್‌ಯುಐರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.