ಶನಿವಾರ, ಜನವರಿ 16, 2021
22 °C
ಪಿಯುಸಿಯಿಂದ ಉನ್ನತಶಿಕ್ಷಣದವರೆಗೆ ವಿದ್ಯಾರ್ಥಿ ವೇತನ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎನ್‌ಟಿಎಸ್‌ ಪರೀಕ್ಷೆ ಜ.24ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಿಯು, ಪದವಿ, ಸ್ನಾತಕೋತ್ತರ ಪದವಿ ಮತ್ತು ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿ ವೇತನ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಪ್ರತಿಭಾಶೋಧ (ಎನ್‌ಟಿಎಸ್‌) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.

ಎನ್‌ಸಿಇಆರ್‌ಟಿ ಮಾರ್ಗದರ್ಶನದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಈ ಪರೀಕ್ಷೆ ನಡೆಸಲಿದೆ. ನ.30ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನ. 2021ರ ಜ.24ಕ್ಕೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

ಕಳೆದ ವರ್ಷ 1.23 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಯಾರು ಭಾಗವಹಿಸಬಹುದು?: ಸರ್ಕಾರಿ, ಅನುದಾನಿತ, ಅನುದಾನ ರಹಿತ, ಸ್ಥಳೀಯ ಸಂಸ್ಥೆಗಳ ಹಾಗೆಯೇ ದೂರಶಿಕ್ಷಣದಲ್ಲಿ ಓದುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ಅರ್ಜಿಯನ್ನು ಕೆಎಸ್‍ಇಇಬಿ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಲಾಗಿದೆ. ಶಾಲೆಗಳ ಮುಖ್ಯಶಿಕ್ಷಕರು kseeb.kar.nic.in ವೆಬ್‍ಸೈಟ್ ಮೂಲಕ ಲಾಗಿನ್ ಆಗಿ ತಮ್ಮ ವಿದ್ಯಾರ್ಥಿಗಳ ಅರ್ಜಿಯನ್ನು ಸಲ್ಲಿಸಬಹುದು.

ಪರೀಕ್ಷೆಯ ಸ್ವರೂಪ ಏನು?: ಬೌದ್ಧಿಕ ಸಾಮರ್ಥ್ಯ ಮತ್ತು ಅಭಿಕ್ಷಮತೆ ಎಂಬ ಎರಡು ಪತ್ರಿಕೆಗಳಿರುತ್ತವೆ. ಕನ್ನಡ, ಇಂಗ್ಲಿಷ್, ಉರ್ದು ಮತ್ತು ಮರಾಠಿ ಮಾಧ್ಯಮಗಳಲ್ಲಿ ಬರೆಯಬಹುದು.

ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ. ದ್ವಿತೀಯ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಯಾರಿಗೆ, ಎಷ್ಟು?: ಪದವಿಪೂರ್ವ ಶಿಕ್ಷಣ ಪಡೆಯಲು ತಿಂಗಳಿಗೆ ₹1,200 ಮತ್ತು ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ತಿಂಗಳಿಗೆ ₹2,000  ಹಾಗೂ ಉನ್ನತ ಶಿಕ್ಷಣದ ಹಂತದಲ್ಲಿ ಯುಜಿಸಿ ನಿಯಮಾನುಸಾರ ವಿದ್ಯಾರ್ಥಿವೇತನ ನೀಡಲಾಗುತ್ತದೆ.

ವಿವರಗಳಿಗೆ 080-23341615.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು