ಭಾನುವಾರ, ಆಗಸ್ಟ್ 14, 2022
25 °C

ಎನ್‌ಟಿಎಸ್‌ಇ ಪರೀಕ್ಷೆ: ಆಯ್ಕೆ ಪಟ್ಟಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಇಲಾಖೆಯು (ಡಿಎಸ್‌ಇಆರ್‌ಟಿ) ಜ.25ರಂದು ನಡೆಸಿದ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ (ಎನ್‌ಟಿಎಸ್‌ಇ) ಆಯ್ಕೆಯಾಗಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಆಯ್ಕೆ ಪಟ್ಟಿಯನ್ನು ಡಿಎಸ್‌ಇಆರ್‌ಟಿ ವೆಬ್‌ಸೈಟ್‌ www.dsert.kar.nic.inನಲ್ಲಿ ಪ್ರಕಟಿಸಲಾಗಿದ್ದು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಲ್ಲೂ ಲಭ್ಯ.

ರಾಜ್ಯಮಟ್ಟದಲ್ಲಿ ನಡೆದ ಪರೀಕ್ಷೆಗೆ 1,61,353 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಮುಂದಿನ ಹಂತದ ಪರೀಕ್ಷೆಗೆ 385 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ದ್ವಿತೀಯ ಹಂತದ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಎನ್‌ಸಿಇಆರ್‌ಟಿ ವೆಬ್‌ಸೈಟ್‌ www.ncert.nic.inನಿಂದ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು