ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನೆರಡು ವಾರಗಳಲ್ಲಿ ನರ್ಸಿಂಗ್ ಮರು ಪರೀಕ್ಷೆ: ಡಾ.ಸುಧಾಕರ್

ಸಾಮೂಹಿಕ ನಕಲು ಆರೋಪ, ತನಿಖೆಗೆ ಆದೇಶ: ಡಾ.ಸುಧಾಕರ್
Last Updated 1 ಡಿಸೆಂಬರ್ 2022, 17:58 IST
ಅಕ್ಷರ ಗಾತ್ರ

ಶಿವಮೊಗ್ಗ: ಬೆಂಗಳೂರಿನ ಕೆಲವು ನರ್ಸಿಂಗ್ ಕಾಲೇಜುಗಳಲ್ಲಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇನ್ನೆರಡು ವಾರಗಳಲ್ಲಿ ಮರು ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನರ್ಸಿಂಗ್ ಪರೀಕ್ಷೆ ಹಗರಣದ ಬಗ್ಗೆ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶೀಘ್ರದಲ್ಲೇ ವರದಿ ಬರಲಿದೆ. ನಂತರ ಲಭ್ಯವಿರುವ ಎಲ್ಲ ತಂತ್ರಜ್ಞಾನ ಬಳಸಿ ರಾಜ್ಯದಾದ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT