ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.30ರಂದು ಕಲಬುರಗಿಯಲ್ಲಿ ಒಬಿಸಿ ಸಮಾವೇಶ: ಸಚಿವ ವಿ.ಸುನಿಲ್‌ ಕುಮಾರ್‌

5 ಲಕ್ಷ ಜನ ಸೇರುವ ನಿರೀಕ್ಷೆ
Last Updated 27 ಅಕ್ಟೋಬರ್ 2022, 11:13 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಇದೇ 30 ರಂದು ಹಿಂದುಳಿದ ವರ್ಗಗಳ ವಿರಾಟ್‌ ಸಮಾವೇಶ ಕಲಬುರ್ಗಿಯಲ್ಲಿ ನಡೆಯಲಿದ್ದು, ಇದರಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ ಕುಮಾರ್‌ ತಿಳಿಸಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಮಾವೇಶದ ಕುರಿತು ಮಾಹಿತಿ ನೀಡಿದರು.

ರಾಜ್ಯದ ಬಿಜೆಪಿ ವತಿಯಿಂದ ಮುಂದಿನ ಎರಡು ತಿಂಗಳಲ್ಲಿ ವಿವಿಧ ರೀತಿಯ ಜನಜಾಗೃತಿ ಸಮಾವೇಶಗಳನ್ನು ಬೇರೆ ಬೇರೆ ಭಾಗಗಳಲ್ಲಿ ನಡೆಸಲಾಗುತ್ತಿದೆ. ನವಭಾರತ ನಿರ್ಮಾಣಕ್ಕೆ ನವ ಕರ್ನಾಟಕದ ಸಿದ್ಧತೆ ಎಂಬ ಪರಿಕಲ್ಪನೆಯೊಂದಿಗೆ ರಾಜ್ಯಾದ್ಯಂತ ಎಲ್ಲ ಸಮುದಾಯ ಎಲ್ಲ ವ್ಯಕ್ತಿಗಳನ್ನು ಜೋಡಿಸುವ ಕಾರ್ಯ ನಡೆದಿದೆ ಎಂದು ಹೇಳಿದರು.

ಕೇಂದ್ರ–ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಹಿಂದುಳಿದ ವರ್ಗಗಳ ಚಟುವಟಿಕೆಗಳು– ಅಭಿವೃದ್ಧಿಗೆ ವಿಶೇಷಾದ್ಯತೆ ಕೊಟ್ಟಿವೆ. ಹಿಂದುಳಿದ ವರ್ಗಗಳ ಜಾತಿಗಳ ಆಯೋಗಕ್ಕೆ ಪ್ರಧಾನಿ ಮೋದಿ ಸರ್ಕಾರ ಸಾಂವಿಧಾನಿಕ ಮಾನ್ಯತೆ ಕೊಟ್ಟಿದೆ. ರಾಜ್ಯದಲ್ಲಿ ಹಿಂದುಳಿ ವರ್ಗಗಳ ಅಭಿವೃದ್ಧಿಗೆ ₹ 250 ಕೋಟಿ ನೀಡಿದ್ದು, ಸಣ್ಣ ಸಣ್ಣ ಸಮುದಾಯಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು, ಅವರನ್ನು ಮುಖ್ಯವಾಹಿನಿಗೆ ತರಲಾಗುತ್ತಿದೆ. ಹಾಸ್ಟೆಲ್‌ಗಳ ನಿರ್ಮಾಣ, ಶೈಕ್ಷಣಿಕ ಚಟುವಟಿಕೆಗೆ ಉತ್ತೇಜನ, ಗಂಗಾ ಕಲ್ಯಾಣ ಯೋಜನೆ ವಿಸ್ತರಣೆ ಮೂಲಕ ಈ ಸಮುದಾಯಗಳ ಕಲ್ಯಾಣಕ್ಕೆ ಶ್ರಮಿಸಲಾಗುತ್ತಿದೆ ಎಂದು ಸುನಿಲ್‌ ಹೇಳಿದರು.

ಸಿದ್ದರಾಮಯ್ಯ ಅವರು ತಮ್ಮನ್ನು ತಾವು ಕೇವಲ ಹಿಂದುಳಿದ ವರ್ಗಗಳ ಧ್ವನಿ ಎಂದು ಭಾಷಣಗಳಲ್ಲಷ್ಟೇ ಹೇಳುತ್ತಿದ್ದರು. ಆದರೆ, ಅವರು ಹೇಳಿದ್ದು ಯಾವುದೂ ಕಾರ್ಯರೂಪಕ್ಕೆ ಬರಲಿಲ್ಲ ಎಂದರು.

ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು ಮಾತನಾಡಿ, ಒಬಿಸಿ ಸಮಾವೇಶದಲ್ಲಿ 224 ಕ್ಷೇತ್ರಗಳು, 312 ಮಂಡಲಗಳಿಂದ ಜನರು ಭಾಗವಹಿಸಲಿದ್ದಾರೆ. 205 ಒಬಿಸಿ ಸಮುದಾಯಗಳ ಪ್ರಮುಖರನ್ನು ಆಹ್ವಾನಿಸಿದ್ದೇವೆ ಎಂದು ಹೇಳಿದರು.

ಸಮಾವೇಶದಲ್ಲಿ ಪಕ್ಷದ ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್‌, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌ ಸಮಾವೇಶ ಉದ್ದೇಶಿಸಿ ಮಾತನಾಡುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಮತ್ತು ಇತರರು ಭಾಗವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT