ಭಾನುವಾರ, ಅಕ್ಟೋಬರ್ 25, 2020
24 °C

ಶಿಕ್ಷಕರಿಗೆ ಅಕ್ಟೋಬರ್ ರಜೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ. 3ರಿಂದ 26ರವರೆಗೆ ನಿಗದಿಪಡಿಸಿದ್ದ ಮಧ್ಯಂತರ ರಜೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ರದ್ದುಪಡಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ಇಲಾಖೆಯ ನಿರ್ದೇಶಕರು (ಪ್ರೌಢ ಶಿಕ್ಷಣ), ‘2020–21ನೇ ಸಾಲಿನ ಶೈಕ್ಷಣಿಕ ಅವಧಿ ಮತ್ತು ಮಧ್ಯಂತರ ರಜೆ ನಿಗದಿಪಡಿಸಿ ಇದೇ ಫೆ. 14ರಂದು ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಲಾಗಿದೆ’ ಎಂದಿದ್ದಾರೆ.

‘ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಯ ಕುರಿತು ಇಲಾಖೆಯಿಂದ ವಿವಿಧ ಹಂತಗಳಲ್ಲಿ ಜಾರಿಗೊಳಿಸುವ ಆದೇಶಗಳಂತೆ ಶಿಕ್ಷಕರು ಕಾರ್ಯನಿರ್ವಹಿಸಬೇಕು. ವಿದ್ಯಾಗಮ ಕಲಿಕಾ ಕಾರ್ಯಕ್ರಮವನ್ನು ಮುಂದಿನ ಆದೇಶದವರೆಗೆ ಯಥಾವತ್‌ ಅನುಷ್ಠಾನಗೊಳಿಸಬೇಕು’ ಎಂದೂ ಅವರು ಸೂಚಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು