ಭಾನುವಾರ, ಜೂನ್ 20, 2021
20 °C

ಅತ್ಯಗತ್ಯ ಸೇವೆ | ಅಧಿಕಾರಿ, ಸಿಬ್ಬಂದಿ ಕಡ್ಡಾಯ ಹಾಜರಿ: ರಾಜ್ಯ ಸರ್ಕಾರ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅತ್ಯಗತ್ಯ ಸೇವೆಗಳನ್ನು ಒದಗಿಸುವ ಏಳು ಇಲಾಖೆಗಳ ಎಲ್ಲ ವರ್ಗದ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು. ಇತರ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಶೇ 50ರಂತೆ ಪಾಳಿಯಲ್ಲಿ ಹಾಜರಾಗಬೇಕು ಎಂದು ರಾಜ್ಯ ಸರ್ಕಾರ ಸೋಮವಾರ
ಆದೇಶಿಸಿದೆ.

ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಆರೋಗ್ಯ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಮತ್ತು ಕ್ಕಳ ರಕ್ಷಣಾ ಸೇವೆಗಳನ್ನು ಒದಗಿಸುತ್ತಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸುತ್ತೋಲೆಯಲ್ಲಿ
ತಿಳಿಸಲಾಗಿದೆ.

ಉಳಿದಂತೆ, ನಗರಾಭಿವೃದ್ಧಿ, ಆಹಾರ, ಇಂಧನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಆರ್ಥಿಕ,  ಪಶುಸಂಗೋಪನೆ ಮತ್ತು ಮೀನುಗಾರಿಕೆ, ಕೃಷಿ, ತೋಟಗಾರಿಕೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಶೇ 50ರಂತೆ ರೊಟೇಷನ್ ಆಧಾರದಲ್ಲಿ ಹಾಜರಾಗಬೇಕು. ಇದೇ 23ರವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ ಎಂದೂ ತಿಳಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು