ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್ ಆತಂಕ: ರಾಜ್ಯದಲ್ಲಿ ಲಸಿಕೆ ವಿತರಣೆಗೆ ವೇಗ

ಡಿಸೆಂಬರ್ ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ 4.54 ಲಕ್ಷ ಡೋಸ್‌ಗಳಷ್ಟು ಲಸಿಕೆ ವಿತರಣೆ
Last Updated 19 ಡಿಸೆಂಬರ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು:ಸಂಭಾವ್ಯ ಕೋವಿಡ್ ಮೂರನೇ ಅಲೆ ಹಾಗೂ ಓಮೈಕ್ರಾನ್ ಪತ್ತೆಯ ಕಾರಣ ರಾಜ್ಯ ಸರ್ಕಾರವು ಲಸಿಕಾ ಅಭಿಯಾನಕ್ಕೆ ವೇಗ ನೀಡಿದೆ. ಈ ತಿಂಗಳು ಪ್ರತಿನಿತ್ಯ ಸರಾಸರಿ 4.54 ಲಕ್ಷ ಡೋಸ್‌ಗಳಷ್ಟು ಲಸಿಕೆ ವಿತರಿಸಲಾಗಿದೆ.

ರಾಜ್ಯದಲ್ಲಿ ಈವರೆಗೆ8.27 ಕೋಟಿ ಡೋಸ್‌ಗಳಷ್ಟು ಲಸಿಕೆ ನೀಡಲಾಗಿದೆ.4.70 ಕೋಟಿಮಂದಿ ಲಸಿಕೆಯ ಮೊದಲ ಡೋಸ್ ಹಾಗೂ3.56 ಕೋಟಿಮಂದಿ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ.ವರ್ಷಾಂತ್ಯಕ್ಕೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡು ಡೋಸ್ ಲಸಿಕೆ ವಿತರಿಸುವ ಗುರಿಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದೆ.

ಈ ತಿಂಗಳು 81.76 ಲಕ್ಷ ಡೋಸ್‌ಗಳಷ್ಟು ಲಸಿಕೆಗಳನ್ನು ನೀಡಲಾಗಿದೆ. ರಾಜ್ಯದಲ್ಲಿ 2021ರ ಜ.16ರಿಂದ ಲಸಿಕೆ ವಿತರಿಸಲಾಗುತ್ತಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿ 4.89 ಲಕ್ಷ ಮಂದಿ 18 ವರ್ಷಗಳು ಮೇಲ್ಪಟ್ಟವರಾಗಿದ್ದಾರೆ.

ಜನವರಿ ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ 21 ಸಾವಿರ ಡೋಸ್‌ಗಳಷ್ಟು ಮಾತ್ರ ಲಸಿಕೆ ವಿತರಿಸಲಾಗಿತ್ತು. ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಮುಂಚೂಣಿ ಯೋಧರಿಗೆ ಪ್ರಾರಂಭಿಕ ದಿನಗಳಲ್ಲಿ ಲಸಿಕೆ ನೀಡಲಾಗಿತ್ತು. ಬಳಿಕ ಆದ್ಯತೆಯ ಅನುಸಾರ ಲಸಿಕೆ ಒದಗಿಸಲಾಯಿತು. ಇದರಿಂದ ದೈನಂದಿನ ವಿತರಣೆಯೂ ಏರಿಕೆ ಕಂಡಿತು.ಸೆಪ್ಟೆಂಬರ್ ಒಂದೇ ತಿಂಗಳಲ್ಲಿ 1.40 ಕೋಟಿ ಡೋಸ್‌ಗಳಷ್ಟು ಲಸಿಕೆ ವಿತರಿಸಲಾಗಿದ್ದು, ಸರಾಸರಿ 4.83 ಲಕ್ಷ ಡೋಸ್‌ಗಳಷ್ಟು ಲಸಿಕೆ ನೀಡಲಾಗಿದೆ.

18 ರಿಂದ 44 ವರ್ಷದೊಳಗಿನವರಲ್ಲಿ 2.71 ಕೋಟಿಮಂದಿ ಮೊದಲ ಡೋಸ್ ಹಾಗೂ 1.90 ಕೋಟಿಮಂದಿ ಎರಡನೇ ಡೋಸ್ಲಸಿಕೆಪಡೆದುಕೊಂಡಿದ್ದಾರೆ. 45 ವರ್ಷ ಮೇಲ್ಪಟ್ಟವರಲ್ಲಿ 1.84 ಕೋಟಿಮಂದಿ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ಅವರಲ್ಲಿ 1.50 ಕೋಟಿಮಂದಿ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ.

ಆರೋಗ್ಯ ಕಾರ್ಯಕರ್ತರಲ್ಲಿ7.64 ಲಕ್ಷ ಹಾಗೂಕೋವಿಡ್ಮುಂಚೂಣಿ ಯೋಧರಲ್ಲಿ 9.43 ಲಕ್ಷ ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಇವರಲ್ಲಿ ಕ್ರಮವಾಗಿ 7.16 ಲಕ್ಷ ಮಂದಿ ಹಾಗೂ 8.86 ಲಕ್ಷ ಮಂದಿ ಎರಡೂ ಡೋಸ್ಲಸಿಕೆಹಾಕಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT