ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮಿಕ್ರಾನ್‌ । ಮತ್ತೊಂದು ಸಾವಿನ ಅಲೆಗೆ ಅವಕಾಶ ಬೇಡ: ಕುಮಾರಸ್ವಾಮಿ

Last Updated 29 ನವೆಂಬರ್ 2021, 7:26 IST
ಅಕ್ಷರ ಗಾತ್ರ

ಬೆಂಗಳೂರು: ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಮಾಡಿಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂ ಮಾಡಿದ್ದಾರೆ.

ಆ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ. ಅವರು ಕೂ ಮಾಡಿರುವ ಸಂಪೂರ್ಣ ವಿವರ ಇಲ್ಲಿದೆ.

ಕೋವಿಡ್‌19 ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್‌ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ ಎಂದು ಅವರು ಕೂ ಮಾಡಿದ್ದಾರೆ.

ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೊನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ.

ಕೊರೊನಾ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸರ್‌, ದೈಹಿಕ ಅಂತರ ಪಾಲನೆ ಮಾಡಿ ಕೋವಿಡ್‌ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ ಎಂದು ಹೇಳಿದ್ದಾರೆ.

ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ ಎಂದು ಕುಮಾರಸ್ವಾಮಿ ಕೂ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT