ಸೋಮವಾರ, ಅಕ್ಟೋಬರ್ 18, 2021
25 °C

ಕೋವಿಡ್‌: ಮೃತರ ಬಡ ಕುಟುಂಬದವರಿಗೆ ಎರಡು ದಿನದಲ್ಲಿ ₹ 1 ಲಕ್ಷ ಪರಿಹಾರ- ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಬಡ ಕುಟುಂಬದವರಿಗೆ ಮುಂದಿನ ಎರಡು– ಮೂರು ದಿನಗಳಲ್ಲಿ ತಲಾ ₹1 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದರು.

ಬೆಲೆ ಏರಿಕೆ ಮೇಲಿನ ಚರ್ಚೆಗೆ ಉತ್ತರಿ
ಸಿದ ಅವರು, ಈವರೆಗೆ ಒಟ್ಟು 7 ರಿಂದ 8 ಸಾವಿರ ಬಿಪಿಎಲ್‌ ಕುಟುಂಬಗಳು ನೋಂದಣಿ ಮಾಡಿವೆ. ನೇರವಾಗಿ ಅವರ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ಅವರು ಹೇಳಿದರು.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ವಿಷಯ ಪ್ರಸ್ತಾಪಿಸಿ, ಮೃತಪಟ್ಟವ
ರಿಗೆ ತಲಾ ₹1 ಲಕ್ಷ ನೀಡುವುದಾಗಿ ಸರ್ಕಾರ ಪ್ರಕಟಿಸಿತ್ತು. ಆದರೆ, ಈವ
ರೆಗೂ ಪರಿಹಾರ ಮೊತ್ತವನ್ನು ನೀಡಿಲ್ಲ ಎಂದರು.

‘ಕೋವಿಡ್‌: ಸಿಗದ ₹1 ಲಕ್ಷ ಪರಿಹಾರ’ ಎಂಬ ಶೀರ್ಷಿಕೆಯಡಿ ಈ ಬಗ್ಗೆ ‘ಪ್ರಜಾವಾಣಿ’ಯು ವಿಶೇಷ ವರದಿ ಪ್ರಕಟಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು