ಮಂಗಳವಾರ, ಡಿಸೆಂಬರ್ 1, 2020
26 °C

ಆನ್‌ಲೈನ್‌ನಲ್ಲಿ ಹಾಸನಾಂಬೆ ದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಅಧಿದೇವತೆ ಹಾಸನಾಂಬೆ ದರ್ಶನೋತ್ಸವ ನ.5ರಿಂದ 16ರವರೆಗೆ ನಡೆಯಲಿದ್ದು, ಸಂಪ್ರದಾಯದಂತೆ ಗುರುವಾರ ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಗರ್ಭಗುಡಿ ಬಾಗಿಲು ತೆರೆಯಲಿದೆ.

ಈ ಬಾರಿ ಕೋವಿಡ್‌ ಭೀತಿಯಿಂದ ಭಕ್ತರ ದರ್ಶನಕ್ಕೆ ನಿರ್ಬಂಧ ವಿಧಿಸಿದ್ದು, ಆನ್‌ಲೈನ್‌ ಮೂಲಕ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.

ನಗರದ ಹತ್ತು ಕಡೆ ಎಲ್‌ಇಡಿ ಪರದೆ ಅಳವಡಿಸಿದ್ದು, ಅಲ್ಲಿಂದಲೇ ಭಕ್ತರು ದೇವಿ ದರ್ಶನ ಪಡೆಯಬಹುದು. ಇದರ ಜತೆಗೆ http://hasanambalive2020.com ಮೂಲಕವೂ 12 ದಿನ ದೇವಿಯ ಪೂಜಾ ಕಾರ್ಯಕ್ರಮಗಳನ್ನು ವೀಕ್ಷಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೊದಲ ದಿನ ಹಾಗೂ ಬಾಗಿಲು ಮುಚ್ಚುವ ದಿನ ಜನಪ್ರತಿನಿಧಿಗಳು, ವಿಶೇಷ ಆಹ್ವಾನಿತರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.