ಬುಧವಾರ, ಡಿಸೆಂಬರ್ 2, 2020
16 °C

ಆನ್‌ಲೈನ್ ಶಿಕ್ಷಣ: ನೋಡಲ್ ಅಧಿಕಾರಿ ನೇಮಕಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಆನ್‌ಲೈನ್‌ ಶಿಕ್ಷಣದ ನಿರ್ವಹಣೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬರುತ್ತಿರುವ ದೂರುಗಳನ್ನು ನಿರ್ವಹಿಸಲು ನೋಡಲ್‌ ಅಧಿಕಾರಿ ನೇಮಕ ಮಾಡಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಸೂಚನೆ ನೀಡಿದರು.

ಅಧಿಕಾರಿಗಳ ಜತೆ ಶನಿವಾರ ಸಭೆ ನಡೆಸಿದ ಅವರು, ‘ಆಯುಕ್ತರ ಕಚೇರಿ ಮತ್ತು ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರ ಹಂತದಲ್ಲಿ ಒಬ್ಬೊಬ್ಬ ನೋಡಲ್ ಅಧಿಕಾರಿ ನೇಮಿಸಬೇಕು. ಆನ್‌ಲೈನ್‌ ಶಿಕ್ಷಣದಲ್ಲಿನ ಸಮಸ್ಯೆ ಮತ್ತು ದೂರುಗಳನ್ನು ಪರಿಶೀಲಿಸಿ ಪರಿಹಾರ ಸೂಚಿಸುವ ಕೆಲಸವಾಗಬೇಕು’ ಎಂದು ಹೇಳಿದರು.

‘ಬೆಂಗಳೂರು, ಕಲಬುರ್ಗಿ, ಬೆಳಗಾವಿ, ಮಂಗಳೂರು, ಹುಬ್ಬಳ್ಳಿ–ಧಾರವಾಡ ಸೇರಿದಂತೆ ಹಲವು ನಗರ ಕೇಂದ್ರಿತ ಪ್ರದೇಶಗಳಲ್ಲಿ ಇಂತಹ ದೂರುಗಳು ಹೆಚ್ಚಾಗಿವೆ. ಸಾರ್ವಜನಿಕರು ಈ ಕುರಿತು ದೂರುಗಳನ್ನು ಇಲಾಖೆಯ ‘ಶಿಕ್ಷಣವಾಣಿ’ ಸಹಾಯವಾಣಿಗೆ (18004257302) ಅಥವಾ ವಾಟ್ಸ್‌ಆ್ಯಪ್‌ ಸಂಖ್ಯೆಗೆ (9483045130) ಸಲ್ಲಿಸಿ ಇಲಾಖೆಯ ಗಮನಕ್ಕೆ ತರಬಹುದು’ ಎಂದರು.

‘ಯಾವುದೇ ಶಾಲೆಗಳಿರಲಿ ಆ‌‌ನ್‌ಲೈನ್ ಶಿಕ್ಷಣವನ್ನು ತಜ್ಞರ ಸಮಿತಿ ಶಿಫಾರಸಿನನ್ವಯ, ಇಲಾಖೆ ಹೊರಡಿಸಿರುವ ಸುತ್ತೋಲೆಗಳನ್ವಯ ವೈಜ್ಞಾನಿಕವಾಗಿಯೇ ನಿರ್ವಹಿಸಬೇಕು. ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕ್ಷೇತ್ರಶಿಕ್ಷಣಾಧಿಕಾರಿಗಳು ಆನ್‌ಲೈನ್ ತರಗತಿಗಳ ಪರಾಮರ್ಶೆ ಮಾಡಬೇಕು. ಕೇಂದ್ರ ಕಚೇರಿಯಲ್ಲಿ ಈ ಕುರಿತ ಮಾಹಿತಿ ಯಾವುದೇ ಸಂದರ್ಭದಲ್ಲಿಯೂ ದೊರೆಯವಂತಾಗಬೇಕು’ ಎಂದು ಸುರೇಶ್‌ಕುಮಾರ್ ಸೂಚಿಸಿದರು.

‘ಆನ್‌ಲೈನ್ ಬೋಧನೆಯನ್ನು ಹಗಲು-ರಾತ್ರಿಯನ್ನದೇ ಮಾಡಲಾಗುತ್ತಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತಿದೆ ಎಂಬ ದೂರುಗಳು ಬರುತ್ತಿವೆ. ಆನ್‍ಲೈನ್ ಬೋಧನಾವಧಿಯನ್ನು ನಿಗದಿ ಪಡಿಸಬೇಕು’ ಎಂದು ಸುರೇಶ್‌ಕುಮಾರ್‌, ಆಯುಕ್ತರಿಗೆ ಸೂಚಿಸಿದರು. 

‘ಜಿಲ್ಲೆ, ತಾಲ್ಲೂಕು, ಬ್ಲಾಕ್, ಕ್ಲಸ್ಟರ್ ಮಟ್ಟದಲ್ಲಿ ಶಾಲಾವಧಿಯನ್ನು ಗಮನಿಸಲು ಅಗತ್ಯ ಕ್ರಮ ವಹಿಸಬೇಕು’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು