ಮಂಗಳವಾರ, ಡಿಸೆಂಬರ್ 1, 2020
18 °C

ಆನ್‌ಲೈನ್‌ ಗೇಮ್‌ ನಿಷೇಧಕ್ಕೆ ಕಾನೂನು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸಲು ಶೀಘ್ರದಲ್ಲಿ ಕಾನೂನು ರೂಪಿಸಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ಮುಖ್ಯಮಂತ್ರಿಯವರ ಪೊಲೀಸ್‌ ಪದಕ ಪ್ರದಾನ ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಆನ್‌ಲೈನ್‌ ಗೇಮ್‌ಗಳಂತಹ ದುಶ್ಚಟಗಳಿಗೆ ಯುವಜನರು ತುತ್ತಾಗುತ್ತಿದ್ದಾರೆ. ಪರಿಣಾಮವಾಗಿ ಅವರ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಈ ಪರಿಸ್ಥಿತಿ ತಪ್ಪಿಸಲು ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸುವ ಚಿಂತನೆ ನಡೆದಿದೆ’ ಎಂದು ತಿಳಿಸಿದರು.

ಬೇರೆ, ಬೇರೆ ರಾಜ್ಯಗಳು ಈಗಾಗಲೇ ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸಿವೆ. ಅಲ್ಲಿ ಈ ಸಂಬಂಧ ರೂಪಿಸಿರುವ ಕಾನೂನುಗಳು ಮತ್ತು ಹೊರಡಿಸಿರುವ ಆದೇಶಗಳನ್ನು ಅಧ್ಯಯನ ಮಾಡಲಾಗುತ್ತಿದೆ. ಅಧಿಕಾರಿಗಳ ಜತೆ ಸಭೆ ನಡೆಸಿದ್ದು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೂ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು