ಮಂಗಳವಾರ, ಆಗಸ್ಟ್ 16, 2022
21 °C

ಆನ್‌ಲೈನ್ ಜೂಜು ನಿಷೇಧ ಕೋರಿ ಅರ್ಜಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಸೂಕ್ತ ನಿಯಮಾವಳಿ ರೂಪಿಸುವ ತನಕ ಎಲ್ಲ ರೀತಿಯ ಆನ್‌ಲೈನ್ ಜೂಜು ಮತ್ತು ಬೆಟ್ಟಿಂಗ್ ನಿಷೇಧಿಸಲು ನಿರ್ದೇಶನ ನೀಡಲು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಜ.12ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಅರ್ಜಿ ಸಲ್ಲಿಸಿರುವ ದಾವಣಗೆರೆ ನಿವಾಸಿ ಡಿ. ಶಾರದಾ, ‘ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್‌ ನಿಯಂತ್ರಿಸಲು ರಾಜ್ಯ ಸರ್ಕಾರ ಯಾವುದೇ ನಿಯಮ ಮತ್ತು ನಿಯಮಾವಳಿ ರಚಿಸಿಲ್ಲ. ಕೋವಿಡ್ ಪರಿಸ್ಥಿತಿಯ ಮಧ್ಯೆ ಮೋಸದಾಟಕ್ಕೆ ಯುವಕರು ಬಲಿಯಾಗುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಇವುಗಳನ್ನು ನಿಯಂತ್ರಿಸುವ ವಿಧಾನಗಳ ಬಗ್ಗೆ ಅಧ್ಯಯನ ನಡೆಸಲು ಗುಜರಾತ್ ಮತ್ತು ತಮಿಳುನಾಡು ಹೈಕೋರ್ಟ್‌ಗಳು ಆಯಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿವೆ ಎಂದು ವಿವರಿಸಿದ್ದಾರೆ.

‘ಆನ್‌ಲೈನ್ ಜೂಜು ಅದೃಷ್ಟದ ಆಟವೇ ಅಥವಾ ಕೌಶಲ ಒಳಗೊಂಡಿರುತ್ತದೆಯೇ ಎಂಬುದರ ಮೇಲ್ವಿಚಾರಣೆ ನಡೆಸಲು ಯಾವುದೇ ಕಾರ್ಯವಿಧಾನ ಇಲ್ಲ. ನಿಯಮ ರೂಪಿಸುವ ಬಗ್ಗೆ ರಾಜ್ಯ ಸರ್ಕಾರವೂ ತಲೆಕೆಡಿಸಿಕೊಂಡಿಲ್ಲ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು