ಬೆಂಗಳೂರು: ‘ಪದವಿ ಕೋರ್ಸ್‌ಗಳ ಬೆಸ ಸೆಮಿಸ್ಟರ್‌ಗಳಿಗೆ ಇನ್ನೂ ಪರೀಕ್ಷೆ ನಡೆಸಿರದಿದ್ದರೂ, ಅವುಗಳ ಮುಂದಿನ ಸಮ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಆನ್‌ಲೈನ್ ತರಗತಿಗಳನ್ನು ಮುಂದುವರಿಸಿ’ ಎಂದು ರಾಜ್ಯದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಶಿಕ್ಷಣ ಕಾಲೇಜುಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ.

’ಈ ಕೋರ್ಸ್‌ಗಳ ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ಕೋವಿಡ್ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು‘ ಎಂದು ಅವರು ತಿಳಿಸಿದರು.

’ಕೆಲವು ಎಂಜಿನಿಯರಿಂಗ್ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ಮಾತ್ರ ಮುಂದಿನ ಸೆಮಿಸ್ಟರ್‌ಗಳಿಗೆ ಹೋಗಲು ಕ್ಯಾರಿ ಓವರ್ ಪದ್ಧತಿ ಅನ್ವಯವಾಗುವುದಿಲ್ಲ. ಅವುಗಳ ಬಗ್ಗೆ ಆಯಾ ಕುಲಪತಿಗಳು ಹಾಗೂ ಪ್ರಾಂಶುಪಾಲರುಗಳು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಜೊತೆ ಸಮಾಲೋಚನೆ ನಡೆಸಿ ನಿರ್ಧಾರಕ್ಕೆ ಬರಬೇಕು‘ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.