ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯೂಆರ್ ಕೋಡ್ ಇರುವ 'ಹಸಿರು ಪಟಾಕಿ' ಬಳಕೆಗಷ್ಟೇ ಅವಕಾಶ

Last Updated 13 ನವೆಂಬರ್ 2020, 11:01 IST
ಅಕ್ಷರ ಗಾತ್ರ

ಬೆಂಗಳೂರು: ಕ್ಯೂಆರ್ ಕೋಡ್ ಮತ್ತು ಹಸಿರು ಲೋಗೊ ಹೊಂದಿರುವ 'ಹಸಿರು ಪಟಾಕಿ' ಬಳಕೆಗಷ್ಟೇ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಪರಿಷ್ಕೃತ ಆದೇಶ ಹೊರಡಿಸಿರುವ ಕಂದಾಯ ಇಲಾಖೆ, ಹೈಕೋರ್ಟ್‌ಗೆ ಶುಕ್ರವಾರ ಈ ಕುರಿತು ಪ್ರಮಾಣಪತ್ರ ಸಲ್ಲಿಸಿದೆ.

ಪಟಾಕಿ ಬಳಕೆ ನಿಷೇಧಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪರಿಷ್ಕೃತ ಆದೇಶದ ಪ್ರತಿ ಸಲ್ಲಿಸಿದರು. ಹೊಸ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ಆದೇಶಿಸಿತು.

ರಾಷ್ಟ್ರೀಯ ಪರಿಸರ ಮತ್ತು ಎಂಜಿನಿಯರಿಂಗ್ ಸಂಶೋಧನಾ ಪ್ರತಿಷ್ಠಾನ (ನೀರಿ) ಹಾಗೂ ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆ ರೂಪಿಸಿರುವ ಹಸಿರು ಲೋಗೊ ಇರುವ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪಟಾಕಿ ಬಾಕ್ಸ್ ಗಳ ಮೇಲೆ ಕ್ಯೂಆರ್ ಕೋಡ್ ಪ್ರಕಟಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT