ಸೋಮವಾರ, ಆಗಸ್ಟ್ 2, 2021
23 °C

ಏಕಕಾಲಕ್ಕೆ ಪರೀಕ್ಷೆ: ಗೊಂದಲದಲ್ಲಿ ವಿದ್ಯಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್‌ಇಟಿ)–2021 ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ಬಿ.ಇಡಿ ಪ್ರವೇಶ ಪರೀಕ್ಷೆಯು ಒಂದೇ ದಿನ ನಿಗದಿಯಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

‘ಎರಡೂ ಪರೀಕ್ಷೆಗಳು ಏಪ್ರಿಲ್‌ 11ಕ್ಕೆ ನಿಗದಿಯಾಗಿವೆ. ಕೆಎಸ್‌ಇಟಿ ಪರೀಕ್ಷೆ ಬರೆಯಲು ಇಚ್ಛಿಸುವವರು ಬಿ.ಇಡಿ ಪ್ರವೇಶ ಪರೀಕ್ಷೆ ಬರೆಯುವ ಅವಕಾಶ ಕಳೆದುಕೊಳ್ಳಬೇಕಾಗಿದೆ. ಇದರಿಂದ ಸಾವಿರಾರು ಮಂದಿಗೆ ತೊಂದರೆಯಾಗಿದೆ. ಹೀಗಾಗಿ ಮೈಸೂರು ವಿಶ್ವವಿದ್ಯಾಲಯವು ಕೆಎಸ್‌ಇಟಿ ಪರೀಕ್ಷೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಬೇಕು. ಹಾಗಾದಾಗ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯಲು ಅನುವಾಗುತ್ತದೆ’ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು