ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಕ್ತ ವಿಶ್ವವಿದ್ಯಾನಿಲಯ: ಪರೀಕ್ಷಾ ವೇಳಾಪಟ್ಟಿ ಪ್ರಕಟ

Last Updated 25 ಆಗಸ್ಟ್ 2020, 19:27 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮುಂದೂಡಲಾಗಿದ್ದ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಬಿ.ಎ., ಬಿ.ಕಾಂ ಪರೀಕ್ಷೆಗಳು ಸೆ.1 ಹಾಗೂ ಸೆ. 5ರಿಂದ ಎಂಬಿಎ ಪರೀಕ್ಷೆಗಳು ನಿಗದಿತ ಕೇಂದ್ರದಲ್ಲಿ ನಡೆಯಲಿದೆ.

2011-12, 2012-13 ಮತ್ತು 2018-19ನೇ ಸಾಲಿನಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ಬಿ.ಎ., ಬಿ.ಕಾಂ., ಪದವಿಗೆ ಪ್ರವೇಶ ಪಡೆದು ಅನುತ್ತೀರ್ಣಗೊಂಡಿರುವ ಅಥವಾ ಪರೀಕ್ಷೆ ತೆಗೆದುಕೊಂಡಿಲ್ಲದ ವಿದ್ಯಾರ್ಥಿಗಳಿಗೆ ಮಾರ್ಚ್ 2020ರ ಮಾರ್ಚ್‌ನಲ್ಲಿ ಪರೀಕ್ಷೆ ಏರ್ಪಡಿಸಲಾಗಿತ್ತು. ಪ್ರಥಮ ಮತ್ತು ದ್ವಿತೀಯ ಸೆಮಿಸ್ಟರ್ ಎಂಬಿಎ ಪದವಿಗೆ 2014-15, 2018-19 (ಜನವರಿ ಆವೃತ್ತಿ) ಮತ್ತು 2019-20 (ಜುಲೈ ಆವೃತ್ತಿ) ಸಾಲಿನಲ್ಲಿ ಪ್ರವೇಶ ಪಡೆದು ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ನಿಗದಿಯಾಗಿತ್ತು. ಆದರೆ, ಕೋವಿಡ್‌ ಕಾರಣದಿಂದ ಮುಂದೂಡಲಾಗಿತ್ತು.

ಪರೀಕ್ಷಾ ವೇಳಾಪಟ್ಟಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT