ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಸ್ನೇಹವನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ಸಿದ್ದರಾಮಯ್ಯನವರಿಗೆ ಹೊಸದಲ್ಲ'

Last Updated 6 ಅಕ್ಟೋಬರ್ 2020, 14:15 IST
ಅಕ್ಷರ ಗಾತ್ರ

ಬೆಂಗಳೂರು: ವೈಯಕ್ತಿಕ ನೆಲೆಯಲ್ಲಿ ಸ್ನೇಹ ವಿಶ್ವಾಸವೇ ಬೇರೆ, ಆದರೆ, ಉಪ ಚುನಾವಣೆ ಘೋಷಣೆಯಾದ ನಂತರ ಪುತ್ರನ ಸ್ನೇಹಿತನನ್ನು ದಾಳವಾಗಿ ಬಳಸಿಕೊಂಡು ಮತ್ತೊಂದು ಪಕ್ಷಕ್ಕೆ ಕಳುಹಿಸುವ ಜಾಯಮಾನ ನನ್ನದಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿ(ಎಸ್) ಒಳಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುವ ಸಿದ್ದರಾಮಯ್ಯ ಅವರ ಬಳಿ ಇದಕ್ಕೆ ಯಾವ ಸಾಕ್ಷಿ ಇದೆ? 'ದೋಸ್ತಿ ದಾಳ'ವನ್ನು ರಾಜಕೀಯವಾಗಿ ಬಳಸಿಕೊಂಡು ತಾವು ಬೆಳೆದ ಪಕ್ಷಗಳಿಗೆ ಕುತ್ತು ತರುವ ಚಾಳಿ ಅವರಿಗೆ ಹೊಸತೇನಲ್ಲ ಎಂದು ದೂರಿದ್ದಾರೆ.

ನನಗೂ ಪಕ್ಷಾತೀತವಾಗಿ ಹಿರಿಯ, ಕಿರಿಯ ಸ್ನೇಹಿತರಿದ್ದಾರೆ. ಪವಿತ್ರ ಸ್ನೇಹವನ್ನು ನಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿಲ್ಲ. ಆದರೆ, ಸಿದ್ದರಾಮಯ್ಯರವರಿಗೆ ಇದೊಂದು ಅಂಟುಜಾಡ್ಯ ಎಂಬುದನ್ನು ಸಾಬೀತು ಪಡಿಸುತ್ತಲೇ ಬಂದಿದ್ದಾರೆ. ಉಪಚುನಾವಣೆ ಘೋಷಣೆಯಾದ ನಂತರ ಪುತ್ರನ ಗೆಳೆಯನನ್ನು ಬಿಜೆಪಿಗೆ ಕಳುಹಿಸಿರುವ ಮರ್ಮವನ್ನು ಕಾಂಗ್ರೆಸ್ಸಿಗರೂ ಬಲ್ಲರು!

ಎನ್ನ ಮನವೆಂಬ ಮರ್ಕಟನು
ತನುವಿಕಾರವೆಂಬ ಅಲ್ಪಸುಖದಾಸೆಗಾಡಿ,
ವೃಥಾ ಭ್ರಮೆಗೊಂಡು, ನಾನಾ ದೆಸೆಗೆ ಲಂಘಿಸಿ
ಅಳಲಿಸಿ ಬಳಲಿಸುತ್ತಿದೆ ನೋಡಾ:
ಕೂಡಲಸಂಗಮೇವರೆಂಬ ಕಲ್ಪವೃಕ್ಷಕ್ಕೆ ಲಂಘಿಸಿ,
ಅಪರಿಮಿತದ ಸುಖವನೈದದು, ನೋಡಾ ಎಂದು ಬಸವಣ್ಣನವರ ವಚನದ ಸಾಲುಗಳನ್ನು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT