ಬುಧವಾರ, ಆಗಸ್ಟ್ 17, 2022
29 °C

ಗೋಹತ್ಯೆ ನಿಷೇಧ, ಲವ್‌ ಜಿಹಾದ್‌ ಕಾಯ್ದೆ ಮಂಡನೆ ವಿರೋಧಿಸುತ್ತೇವೆ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ವಿಧಾನ ಮಂಡಲ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ನಿಷೇಧ ಕಾಯ್ದೆಯ ಮಸೂದೆ ಮಂಡಿಸಿದರೆ ನಾವು (ಕಾಂಗ್ರೆಸ್‌) ವಿರೋಧಿಸುತ್ತೇವೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

‘ಸೋಮವಾರದಿಂದ (ಡಿ. 7) ಅಧಿವೇಶನ ನಡೆಯಲಿರುವುದರಿಂದ ಉಭಯ ಸದನಗಳ ಪಕ್ಷದ ಹಿರಿಯ ಸದಸ್ಯರ ಸಭೆ ಕರೆದಿದ್ದೆ. ಅಧಿವೇಶನದ ಕಾರ್ಯಸೂಚಿ ಇನ್ನೂ ಆಗಿಲ್ಲ. ಅಧಿವೇಶನದಲ್ಲಿ ಏನೇನು ಚರ್ಚೆ ಮಾಡಬೇಕು ಅಂದುಕೊಂಡಿದ್ದಾರೊ ಗೊತ್ತಿಲ್ಲ’ ಎಂದರು.

‘ಕಳೆದ ಬಾರಿಯ ನೆರೆ ಹಾವಳಿಯಿಂದ ಸಂತ್ರಸ್ತರಾದವರಿಗೆ ಸರ್ಕಾರ ಇನ್ನೂ ಪರಿಹಾರ ನೀಡಿಲ್ಲ. ಈಗ ಬಿಜೆಪಿಯವರು ಹೊಸ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದ್ದಾರೆ. ಮನೆಗಳನ್ನು ಕಟ್ಟಲು ಅನುದಾನ ಕೊಟ್ಟಿಲ್ಲ. ಅವರಿಗೆ ಬೇಕಾದವರಿಗೆ ಅನುದಾನ ಕೊಡಲು ಅನ್ ಲಾಕ್ ಮಾಡುತ್ತಾರೆ. ಬೇಡದವರಿಗೆ ಕೊಡಲ್ಲ’ ಎಂದು ದೂರಿದರು.

‘ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ಕಾಯ್ದೆ ತರಲು ಬಿಜೆಪಿ ಕಾರ್ಯಕಾರಿಣಿಯಲ್ಲಿ ಚರ್ಚೆ ಮಾಡಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆ ಇರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಇಂಥ ಸಂಧರ್ಭದಲ್ಲಿ ಈ ರೀತಿಯ ಕಾಯ್ದೆ ತರಲು ಅವಕಾಶ ಇಲ್ಲ. ಈ ಕಾಯ್ದೆಗಳು ಜನರ ಮೇಲೆ ಪರಿಣಾಮ ಬೀರಲಿದೆ’ ಎಂದರು.

‘ಸರ್ಕಾರ ಎಷ್ಟು ಸಾಲ ತೆಗೆದುಕೊಂಡಿದೆ. ರಾಜ್ಯದ ಆರ್ಥಿಕ ಸ್ಥಿತಿ ಹೇಗಿದೆ ಎಂಬ ಬಗ್ಗೆ ಸರ್ಕಾರ ಶ್ವೇತ ಪತ್ರ ಮಂಡಿಸಬೇಕು’ ಎಂದೂ ಸಿದ್ದರಾಮಯ್ಯ ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು